ಗುಂಡ್ಲುಪೇಟೆ: ಏ.21ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಂಡ್ಲುಪೇಟೆಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಶಾಸಕ ಎಚ್.ಎಂ.ಗಣೇಶಪ್ರಸಾದ್ ಪೂರ್ವಸಿದ್ಧತೆ ಪರಿಶೀಲನೆ ನಡೆಸಿದರು.

ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನ ಮುಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಹೆಲಿಪ್ಯಾಡ್ ಸ್ಥಳಕ್ಕೆ ಮೊದಲಿಗೆ ಭೇಟಿ ನೀಡಿದ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಪರಿಶೀಲನೆ ನಡೆಸಿ, ಸಿಎಂ ಆಗಮನದ ಸಂದರ್ಭದಲ್ಲಿ ಯಾವುದೇ ರೀತಿಯಲ್ಲಿ ಅಹಿತಕರ ಘಟನೆ ಮತ್ತು ಟ್ರಾಫಿಕ್ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವೇದಿಕೆ ಪರಿಶೀಲನೆ: ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ ವೇದಿಕೆಯನ್ನು ಪರಿಶೀಲನೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಸೂಕ್ತ ಆಸನಗಳ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರು, ಊಟದ ಕೌಂಟರ್ಗಳನ್ನು ಪ್ರತ್ಯೇಕವಾಗಿ ತೆರೆದು ಯಾವುದೇ ಗೊಂದಲಕ್ಕೆ ಅವಕಾಶ ನೀಡದಂತೆ ಯೋಜನೆ ರೂಪಿಸಬೇಕು. ಜೊತೆಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕು ಎಂದು ತಾಕೀತು ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, 110 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಶಂಕುಸ್ಥಾಪನೆ ಜೊತೆಗೆ ಹತ್ತಿ ಮಾರುಕಟ್ಟೆ ಉದ್ಘಾಟನೆ, ವಾಲ್ಮೀಕಿ ಭವನ, ಅಂಬೇಡ್ಕರ್ ವಸತಿ ಶಾಲೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್.ಪಾಟೀಲ್ ಸೇರಿದಂತೆ ಹಲವು ಮಂದಿ ಸಚಿವರು ಆಗಮಿಸಲಿದ್ದಾರೆ. ಕಾರ್ಯಕ್ರಮ ಅಧ್ಯಕ್ಷತೆಯನ್ನು ಶಾಸಕ ಎಚ್.ಎಂ.ಗಣೇಶಪ್ರಸಾದ್ ವಹಿಸಲಿದ್ದಾರೆ. ಸಂಸದ ಸುನೀಲ್ ಬೋಸ್ ಸೇರಿದಂತೆ ಜಿಲ್ಲೆಯ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಎಂ.ಆರ್.ಮಂಜುನಾಥ್ ಇತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಗುಂಡ್ಲುಪೇಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕರೆಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಬೇಕೆಂಬ ಶಾಸಕ ಗಣೇಶಪ್ರಸಾದ್ ಒತ್ತಾಸೆಯಂತೆ ಸಿ.ಎಂ ಆಗಮಿಸುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಸುಮಾರು 15 ಸಾವಿರಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆಯಿದ್ದು, ಯಶಸ್ಸಿಗೆ ಎಲ್ಲರೂ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಶಾಸಕ ಎಚ್.ಎಂ.ಗಣೇಶಪ್ರಸಾದ್, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್, ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ, ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೋನಾ ರೋತ್, ಡಿವೈಎಸ್ಪಿ ಸ್ನೇಹಾರಾಜ್, ತಹಶೀಲ್ದಾರ್ ತನ್ಮಯ್, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್, ಪುರಸಭೆ ಮಾಜಿ ಅಧ್ಯಕ್ಷ ಮಧುಸೂಧನ್, ಮಾಜಿ ಉಪಾಧ್ಯಕ್ಷ ಅಣ್ಣಯ್ಯಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-37-1539370900

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.