ಗುಂಡ್ಲುಪೇಟೆ: ಕಾಡಾನೆ ದಾಳಿ ನಡೆಸಿ ಸೋಲಾರ್ ತಂತಿ ಬೇಲಿ ಮತ್ತು ಈರುಳ್ಳಿ ಫಸಲನ್ನು ತುಳಿದು ನಾಶ ಪಡಿಸಿರುವ ಘಟನೆ ತಾಲ್ಲೂಕಿನ ಬಂಡೀಪುರ ಅಭಯಾರಣ್ಯದ ಓಂಕಾರ ವಲಯ ವ್ಯಾಪ್ತಿಯ ಮಂಚಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಸುಬ್ಬಮ್ಮ ಸಿದ್ದಶೆಟ್ಟಿ ಎಂಬ ರೈತರ ಸರ್ವೆ ಸಂಖ್ಯೆ 163/5 ಜಮೀನಿನ ತಂತಿ ಬೇಳಿ ನಾಶಪಡಿಸಿದ ಸಲಗ ಅರ್ಧ ಎಕರೆಗೂ ಹೆಚ್ಚು ಈರುಳ್ಳಿ ಬೆಳೆಯನ್ನು ತುಳಿದು ಹಾಕಿದೆ. ಇದರಿಂದ ಅಪಾರ ನಷ್ಟವುಂಟಾಗಿದೆ.

ನಿಲ್ಲದ ಕಾಡಾನೆ ಉಪಟಳ: ಓಂಕಾರ ವಲಯ ವ್ಯಾಪ್ತಿಯ ಮಂಚಹಳ್ಳಿ ಸುತ್ತಮುತ್ತಲು ಒಂಟಿ ಸಲಗ ಉಪಟಳ ವಿಪರೀತವಾಗಿದ್ದು, ನಿರಂತರವಾಗಿ ಫಸಲುಗಳ ಮೇಲೆ ಲಗ್ಗೆಯಿಟ್ಟು ತುಳಿದು, ತಿಂದು ನಾಶಪಡಿಸುತ್ತಿವೆ. ಇದರಿಂದ ರೈತರು ರೋಸಿ ಹೋಗಿದ್ದು, ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ರಮಕ್ಕೆ ಒತ್ತಾಯ: ಆನೆ ಹಾವಳಿ ಹೆಚ್ಚಾಗಿದ್ದರೂ ಅರಣ್ಯ ಇಲಾಖೆ ಸಿಬ್ಬಂದಿ ಸಮರ್ಪಕವಾಗಿ ಗಸ್ತು ತಿರುಗುತ್ತಿಲ್ಲ. ಕಾಡಾನೆಗಳನ್ನು ಕಾಡಿಗಟ್ಟುವ ಪ್ರಯತ್ನವನ್ನು ಅರಣ್ಯಾಧಿಕಾರಿಗಳು ನಡೆಸುತ್ತಿಲ್ಲ. ಇದರಿಂದ ರೈತರಿಗೆ ಅಪಾರ ನಷ್ಟ ಉಂಟಾಗುತ್ತಿದೆ. ಆದ್ದರಿಂದ ಕೂಡಲೇ ಕಾಡಾನೆ ರೈತರ ಜಮೀನುಗಳ ಮೇಲೆ ದಾಳಿ ನಡೆಸದಂತೆ ಕ್ರಮ ವಹಿಸಬೇಕೆಂದು ರೈತ ಮುಖಂಡರು ಒತ್ತಾಯಿಸಿದ್ದಾರೆ.

ಕಾಡು ಪ್ರಾಣಿಗಳ ಹಾವಳಿಯಿಂದ ಉಂಟಾಗುವ ಬೆಳೆ ನಷ್ಟಕ್ಕೆ ರೈತರಿಗೆ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-37-2077549874

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.