ಗುಂಡ್ಲುಪೇಟೆ: ‘ಕೌಶಲದಿಂದ ಮಹಿಳೆಯರಲ್ಲಿ ಆತ್ಮವಿಶ್ವಾಸ ಹೆಚ್ಚಿ ಜೀವನಮಟ್ಟ ಸುಧಾರಿಸುತ್ತದೆ’ ಎಂದು ಅಂತರರಾಷ್ಟ್ರೀಯ ಮಾನವ ಅಭಿವೃದ್ಧಿ ಮತ್ತು ಏಳಿಗೆ ಸಂಸ್ಥೆ ಟ್ರಸ್ಟಿ ಭಾಗ್ಯ ಅಜಯ್ಕುಮಾರ್ ತಿಳಿಸಿದರು.

ಪಟ್ಟಣದಲ್ಲಿ ಅಂತರರಾಷ್ಟ್ರೀಯ ಮಾನವ ಅಭಿವೃದ್ಧಿ ಮತ್ತು ಏಳಿಗೆ ಸಂಸ್ಥೆ ಮತ್ತು ನಬಾರ್ಡ್ ಚಾಮರಾಜನಗರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕೌಶಲ ಅಭಿವೃದ್ಧಿ ಯೋಜನೆಯಡಿಯಲ್ಲಿ ಎಂಬ್ರಾಯ್ಡರಿ ಹಾಗೂ ಲಿಪ್ಪನ್ ಆರ್ಟ್ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಸಂಸ್ಥೆಯು ಮಹಿಳೆಯರ ಏಳಿಗೆಗಾಗಿ ನಿರಂತರವಾಗಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ಗುಂಡ್ಲುಪೇಟೆ ಭಾಗದ ಮಹಿಳೆಯರು ಹೆಚ್ಚಿನ ರೀತಿಯಲ್ಲಿ ಇದರಲ್ಲಿ ತೊಡಗಿಸಿಕೊಂಡಿ ಸೌಲಭ್ಯ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

ನಬಾರ್ಡ್ ಡಿಡಿಎಂ ಹಿತಾ ಸುವರ್ಣ ಮಾತನಾಡಿ, ಸಂಸ್ಥೆಯು ಗುಂಡ್ಲುಪೇಟೆ ಭಾಗದಲ್ಲಿ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿರುವ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಸುರೇಖಾ, ಸಂಸ್ಥೆಯ ಯೋಜನಾ ಮುಖ್ಯಸ್ಥ ಮಧು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-37-1224427460

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.