ಗುಂಡ್ಲುಪೇಟೆ: ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಗುಂಡ್ಲುಪೇಟೆ, ವಿಠ್ಠಲ್ ಕಣ್ಣಿನ ಆಸ್ಪತ್ರೆ ಬೆಂಗಳೂರು ಹಾಗೂ ಬೆಂಗಳೂರಿನ ಶ್ರದ್ಧಾ ಐ ಕೇರ್ ಸೆಂಟರ್ ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕಿನ ಬೇಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರ ಹಾಗೂ ಮಧುಮೇಹ ಕಣ್ಣಿನ ರೆಟಿನೋಪತಿ ತಪಾಸಣಾ ಶಿಬಿರ ನಡೆಯಿತು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಲೀಂ ಪಾಷಾ ಬಿ.ಆರ್ ಮಾತನಾಡಿ, ‘ಕಣ್ಣಿನ ಪೊರೆ ಹಾಗೂ ಮಧುಮೇಹದಿಂದ ಉಂಟಾಗುವ ಕಣ್ಣಿನ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಅತ್ಯಗತ್ಯ. ವಿಶೇಷವಾಗಿ 40 ವರ್ಷ ಮೇಲ್ಪಟ್ಟವರು, ಮಧುಮೇಹಿಗಳು ಹಾಗೂ ದೃಷ್ಟಿ ಮಂಕಾಗುತ್ತಿರುವವರು ನಿಯಮಿತವಾಗಿ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳಬೇಕು. ಸರ್ಕಾರದಿಂದ ಲಭ್ಯವಿರುವ ನೇತ್ರ ಚಿಕಿತ್ಸಾ ಉಚಿತ ಸೇವೆಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಶಿಬಿರದಲ್ಲಿ 150 ಜನರಿಗೆ ಕಣ್ಣಿನ ತಪಾಸಣೆ ನಡೆಸಿ, ದೃಷ್ಟಿದೋಷ, ಕಣ್ಣಿನ ಪೊರೆ, ಮಧುಮೇಹದಿಂದ ಉಂಟಾಗುವ ಕಣ್ಣಿನ ಸಮಸ್ಯೆಗಳು ಸೇರಿದಂತೆ ವಿವಿಧ ನೇತ್ರ ಸಂಬಂಧಿತ ಸಮಸ್ಯೆಗಳನ್ನು ಪರಿಶೀಲಿಸಲಾಯಿತು.

ನೇತ್ರಾಧಿಕಾರಿಗಳಾದ ದ್ರಾಕ್ಷಾಯಿಣಿ, ಡಾ.ವಿಕ್ರಂ, ಕಚೇರಿ ಅಧೀಕ್ಷಕ ಮಹೇಶ್ವರ ನಾಯಕ, ಕಾವ್ಯಶ್ರೀ, ರವಿ, ಸತೀಶ್, ಸುನಿತಾ, ಉದಯಕುಮಾರಿ, ಕಲ್ಪನಾ, ಸೌಭಾಗ್ಯ, ಸೋನಾ,ರಾಘವೇಂದ್ರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-37-986166834

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.