ಗುಂಡ್ಲುಪೇಟೆ: ‘ತಾಲ್ಲೂಕಿನಲ್ಲಿ ಬರಗಾಲವಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗಿದ್ದು, ಕೂಡಲೇ ಸಮರ್ಪಕ ಮೇವು ಪೂರೈಕೆಗೆ ಕ್ರಮ ವಹಿಸಬೇಕು’ ಎಂದು ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ತಹಶೀಲ್ದಾರ್ ತನ್ಮಯ್ ಅವರಿಗೆ ಮನವಿ ಸಲ್ಲಿಸಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಗೆ ಬಂದು ಮನವಿ ಸಲ್ಲಿಸಿದ ರೈತ ಮುಖಂಡರು, ತಾಲ್ಲೂಕಿನ ಭೀಮನಬೀಡು, ಮಾಡ್ರಹಳ್ಳಿ, ದೇಶಿಪುರ, ಕೋಡಹಳ್ಳಿ, ಹೊನ್ನೇಗೌಡನಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಮಳೆ ಇಲ್ಲದ ಕಾರಣ ಮೇವಿನ ಕೊರತೆ ಉಂಟಾಗಿದೆ. ಮುಂದಿನ ದಿನಗಳಲ್ಲಿ ಸಮಸ್ಯೆ ಇನ್ನಷ್ಟು ಬಿಗಡಾಯಿಸುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಇದರ ಬಗ್ಗೆ ಕೂಡಲೇ ಕ್ರಮ ವಹಿಸಿ ಸಮರ್ಪಕವಾಗಿ ಮೇವು ಪೂರೈಕೆಗೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

‘ತಾಲ್ಲೂಕಿನಲ್ಲಿ ಬೇಸಿಗೆಯ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಇದರಿಂದ ಸಾರ್ವಜನಿಕರು ಮನೆಯಿಂದ ಹೊರ ಬರಲಾರದ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ಜಮೀನುಗಳಿಗೆ ತೆರಳಲು ಸಾಧ್ಯವಾಗದ ಪರಿಸ್ಥಿತಿ ಇದ್ದು, ಜಾನುವಾರುಗಳಿಗೂ ಮೇವಿನ ಕೊರತೆಯಾಗಿದೆ. ಸಮಸ್ಯೆ ಬಿಗಡಾಯಿಸುವ ಮುನ್ನ ಎಚ್ಚೆತ್ತುಕೊಂಡು ರೈತರಿಗೆ ಮೇವು ನೀಡಬೇಕು’ ಎಂದು ಮನವಿ ಮಾಡಿದರು.

ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಅಧ್ಯಕ್ಷೀಯ ಮಂಡಳಿ ಸದಸ್ಯರಾದ ಮಾಡಹಳ್ಳಿ ಪಾಪಣ್ಣ, ಬರಗಿ ಮಹೇಶ್, ತಾಲ್ಲೂಕು ಅಧ್ಯಕ್ಷೀಯ ಮಂಡಳಿ ಸದಸ್ಯರಾದ ಭೀಮನಬೀಡು ರಾಜು, ಬೇರಂಬಾಡಿ ಶಶಿ, ಸಿದ್ದಪ್ಪ, ದೇಶಿಪುರ ಆರಾಧ್ಯ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-37-11133819

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.