ಗುಂಡ್ಲುಪೇಟೆ: ಪಟ್ಟಣದ ಮಡಹಳ್ಳಿ ರಸ್ತೆಯಲ್ಲಿರುವ ಸರ್ಕಾರಿ ನೌಕರರ ಭವನದಲ್ಲಿ ಮೇ 2ರ ಶನಿವಾರ ಕೊಯಮತ್ತೂರಿನ ಅರವಿಂದ ಕಣ್ಣಾಸ್ಪತ್ರೆಯ ತಜ್ಞ ವೈದ್ಯರಿಂದ ಕಣ್ಣಿನ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ.

ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ಉದ್ಯಮಿ ಎಂ.ಸುಜೀಂದ್ರ ಹಾಗೂ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘಗಳ ಸಹಯೋಗದಲ್ಲಿ ಆಯೋಜಿಸಿರುವ ಶಿಬಿರ ಶನಿವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ. ಇದರಲ್ಲಿ ಕಣ್ಣಿನ ಸಮಸ್ಯೆಗಳಾದ ಪೊರೆ, ಗ್ಲಾಕೋಮಾ, ನೀರು ಸೋರುವಿಕೆ, ಗೀಜು ಬರುವುದು, ಹತ್ತಿರ ಮತ್ತು ದೂರದೃಷ್ಟಿ ದೋಷ, ವಾರೆಕಣ್ಣು, ರಾತ್ರಿ ಕುರುಡುತನ ಇವುಗಳ ಬಗ್ಗೆ ತಪಾಸಣೆ ನಡೆಸಲಾಗುವುದು.

ಸ್ಥಳದಲ್ಲಿಯೇ ರಿಯಾಯಿತಿ ದರದಲ್ಲಿ ಕನ್ನಡಕಗಳನ್ನು ಕೊಡಲಾಗುವುದು. ಶಸ್ತ್ರಚಿಕಿತ್ಸೆ ಅಗತ್ಯವಿರುವ ರೋಗಿಗಳನ್ನು ಕೊಯಮತ್ತೂರಿಗೆ ಕರೆದೊಯ್ದು ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ಆದ್ದರಿಂದ ಕಣ್ಣಿನ ತೊಂದರೆಯಿರುವ ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅನುಗ್ರಹ ಸಂಸ್ಥೆಯ ಸಂಯೋಜಕ ಕೆ.ರಮೇಶ್ ತಮ್ಮ ಪ್ರಕಟಣೆಯಲ್ಲಿ ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-37-763740939

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.