ಗುಂಡ್ಲುಪೇಟೆ: ಪೋಷಕರು ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು ಎಂದು ಅಬಕಾರಿ ನಿರೀಕ್ಷಕಿ ಎನ್.ದೀಪು ಸಲಹೆ ನೀಡಿದರು.

ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಜ್ಞಾನ ಭವನದಲ್ಲಿ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಅಡುಗೆ ಮನೆಯಿಂದ ಹಿಡಿದು ಅಂತರಿಕ್ಷದವರೆಗೆ ಮಹಿಳೆ ಕಾರ್ಯ ನಿರ್ವಹಿಸಿ ಮಹಿಳೆ ಯಶಸ್ವಿಯಾಗಿದ್ದಾಳೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹೆಣ್ಣು ಮಕ್ಕಳು ಇತ್ತೀಚಿನ ದಿನಗಳಲ್ಲಿ ಯಾವುದೇ ಕೆಲಸದಲ್ಲೂ ಹಿಂದುಳಿದಿಲ್ಲ. ಇದನ್ನು ಸಾಧಿಸಲು ಪ್ರಯತ್ನದ ಜೊತೆಗೆ ಹಠವೂ ಬೇಕಾಗಿದೆ. ಇದಕ್ಕೆ ಮಕ್ಕಳಿಗೆ ಶಿಕ್ಷಣವನ್ನು ನೀಡಿ ಎಂದು ತಿಳಿಸಿದರು.

ಸಿಡಿಪಿಒ ಹೇಮಾವತಿ ಮಾತನಾಡಿ, ಹೆಣ್ಣು ಮಕ್ಕಳಿಗೆ ಇತ್ತೀಚಿನ ದಿನಗಳಲ್ಲಿ ಪೋಷಕರು ವಿದ್ಯಾಭ್ಯಾಸವನ್ನು ಕೊಡಿಸುತ್ತಿದ್ದು, ಕೆಲವೊಮ್ಮೆ ಹೆಣ್ಣು ಮಕ್ಕಳು ಪ್ರೀತಿ ಪ್ರೇಮದ ಬಲೆಗೆ ಬಿದ್ದು ಮೋಸ ಹೋದ ಘಟನೆಗಳು ಪೋಷಕರಿಗೆ ಭಯವನ್ನುಂಟು ಮಾಡುತ್ತಿವೆ. ಮಹಿಳೆ ಸಮಾಜ ಕಟ್ಟುವ ಹಂತದಲ್ಲಿ ಭಾಗಿಯಾಗುತ್ತಿದ್ದಾಳೆ. ಶಿಕ್ಷಣದ ಅಗತ್ಯವಾಗಿದೆ ಎಂದು ತಿಳಿಸಿದರು.

ಮಕ್ಕಳಿಗೆ ಬಾಲಕಿಯರ ವಿವಾಹ ಹಾಗೂ ಗರ್ಭಿಣಿಯಾಗುವುದರಿಂದ ಆಗುವ ದುಷ್ಪರಿಣಾಮಗಳ ಕುರಿತು ಅರಿವು ನೀಡಬೇಕು. ಪ್ರಕರಣಗಳು ಹೆಚ್ಚುತ್ತಿದ್ದು ಪೋಕ್ಸೊ ಕಾಯ್ದೆ ಕಾನೂನನ್ನು ಪಾಲಿಸಿದ್ದಲ್ಲಿ ಸುಸ್ಥಿರ ಸಮಾಜ ನಿರ್ಮಾಣದ ಕರ್ತವ್ಯವನ್ನು ನಿರ್ವಹಿಸಿದಂತಾಗುತ್ತದೆ ಎಂದು ಹೇಳಿದರು.

ಆರ್.ಎಲ್. ಎಚ್.ಪಿ ನಿರ್ದೇಶಕಿ ಸರಸ್ವತಿ, ಸಂಸ್ಥೆ ನಡೆದು ಬಂದ ಹಾದಿ ಹಾಗೂ ಮಹಿಳಾ ದಿನಾಚರಣೆಯ ಪ್ರಾಮುಖ್ಯತೆ ಬಗ್ಗೆ ತಿಳಿಸಿದರು. ಮಹಿಳಾ ಹೋರಾಟಗಾರ್ತಿ ಮಮತಾ ಯಜಮಾನ್ ಮಾತನಾಡಿ ದರು.

ಮಹಿಳೆಯರು ಮತ್ತು ಹೆಣ್ಣು ಮಕ್ಕಳು ನೃತ್ಯಗಳನ್ನು ಪ್ರದರ್ಶಿಸಿ, ಕ್ರೀಡೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದುಕೊಂಡರು. ಆರ್.ಎಲ್.ಎಚ್.ಪಿ.ಸಂಸ್ಥೆಯ ಪ್ರತಿಮಾ , ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-37-1963795407

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.