ಗುಂಡ್ಲುಪೇಟೆ: ಗಿರಿಜನ ಪ್ರದೇಶದಲ್ಲಿ ಆರೋಗ್ಯ ಸೇವೆಗಳ ಬಲವರ್ಧನೆ ಹಾಗೂ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ವಹಿಸಬೇಕು ಎಂದು ಡಿಎಚ್ಒ ಡಾ.ಚಿದಂಬರ ಸೂಚನೆ ನೀಡಿದರು.

ತಾಲ್ಲೂಕಿನ ಬಂಡೀಪುರ ಕಾಡಂಚಿನ ಮಂಗಲ ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಹಾಡಿ ಜನರ ಆರೋಗ್ಯ ಸೌಲಭ್ಯಗಳ ಅಭಿವೃದ್ಧಿ, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನ, ಸಿಬ್ಬಂದಿ ನೇಮಕಾತಿಗಾಗಿ ಸಂದರ್ಶನ ನಡೆಸುವುದು ಹಾಗೂ ಪ್ರಮುಖ ಆರೋಗ್ಯ ಸೂಚ್ಯಂಕಗಳ ಸುಧಾರಣೆಗಾಗಿ ಮಾಹಿತಿ ಪಡೆದರು.

ಈ ಹಿಂದೆ ಎಜೆಡಿಟಿ ಟ್ರಸ್ಟ್, ಮೈಸೂರು ಎನ್.ಜಿ.ಒ. ಸಂಸ್ಥೆ ನಡೆಸುತ್ತಿದ್ದ ಸಂಸ್ಥೆ ಆರೋಗ್ಯ ಇಲಾಖೆಗೆ ಮರು ಹಸ್ತಾಂತರಗೊಂಡ ನಂತರ ಪರಿಶೀಲನೆ ಮಾಡಲು ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ್ದರು. ಜೊತೆಗೆ ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ, ದಾಖಲಾತಿ ನಿರ್ವಹಣೆ ಹಾಗೂ ಮೇಲ್ವಿಚಾರಣೆಗಾಗಿ ಸಮುದಾಯ ಆರೋಗ್ಯ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರಿಗೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ರಿಜಿಸ್ಟರ್ಗಳನ್ನು ವಿತರಿಸಲಾಯಿತು.

ಮಂಗಲ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯರು, ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-37-1145428064

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.