ಗುಂಡ್ಲುಪೇಟೆ: ತಾಲ್ಲೂಕಿನ ಹೊರೆಯಾಲ ಗ್ರಾಮದಲ್ಲಿ ಬುದ್ಧ, ಬಸವ, ಅಂಬೇಡ್ಕರ್, ವಾಲ್ಮೀಕಿ ಪುತ್ಥಳಿಯ ಸ್ವಾಗತ ಕಮಾನು ನಿರ್ಮಾಣಕ್ಕೆ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪರ ಆಪ್ತ ಸಹಾಯಕ ಗೋಪಾಲ್ ಹೊರೆಯಾಲ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಾನತೆ ಸಾರುವ ಉದ್ದೇಶದಿಂದ ಬುದ್ಧ, ಬಸವ, ಅಂಬೇಡ್ಕರ್, ವಾಲ್ಮೀಕಿ ಪುತ್ಥಳಿ ಗ್ರಾಮದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಸ್ವಾಗತ ಕಮಾನಿನ ಕೆಳಗೆ ತೆರಳುವಾಗ ಈ ನಾಲ್ಕು ಮಹನೀಯರ ನೆರಳು ಪ್ರತಿಯೊಬ್ಬರ ಮೇಲೆ ಬಿದ್ದು, ಅವರ ಆದರ್ಶ, ಸಮಾನತೆ ಎಲ್ಲವನ್ನು ಮೈಗೂಡಿಸಿಕೊಳ್ಳಬೇಕು ಎಂಬ ಆಶಯವಾಗಿದೆ ಎಂದರು.

ಬುದ್ಧ, ಬಸವ, ಅಂಬೇಡ್ಕರ್, ವಾಲ್ಮೀಕಿ ನಾಲ್ವರು ಮಹಾನ್ ನಾಯಕರು ಸಮಾಜದಲ್ಲಿ ಜಾತಿ ವ್ಯವಸ್ಥೆ ಹೋಗಲಾಡಲು ಸಾಕಷ್ಟು ಶ್ರಮ ವಹಿಸಿದ್ದಾರೆ. ಅಂಬೇಡ್ಕರ್ ಸಂವಿಧಾನ ರಚಿಸಿ ಎಲ್ಲರಿಗೂ ಹಕ್ಕುಗಳನ್ನು ನೀಡಿದರೆ, ಬಸವಣ್ಣ ಎಲ್ಲಾ ಜಾತಿಯವರು ಸಮನಾಗಿ ಬದುಕಬೇಕು ಎಂದು ಸಾರಿದರು. ಗೌತಮ ಬುದ್ಧ ಅಹಿಂಸಾ ತತ್ವದಡಿ ಜಗತ್ತನ್ನು ಕೊಂಡೊಯ್ದರು. ವಾಲ್ಮೀಕಿ ಮಹರ್ಷಿಗಳು ಕೂಡ ರಾಮಾಯಣ ಬರೆದು ಮಾದರಿಯಾಗಿದ್ದಾರೆ ಎಂದು ಶ್ಲಾಘಿಸಿದರು.

ಗುಂಡ್ಲುಪೇಟೆ ತಾಲ್ಲೂಕಿಗೆ ಸುಮಾರು 200ರಿಂದ 300 ಗಂಗಾ ಕಲ್ಯಾಣ ಕೊಳವೆಬಾವಿ ಮಂಜೂರು ಮಾಡಲಾಗಿದೆ. ಸ್ವಾವಲಂಬಿ ಸಾರಥಿ ಯೋಜನೆಯಡಿಯಲ್ಲಿ ಹಲವು ಮಂದಿಗೆ ವಾಹನಗಳನ್ನು ನೀಡಲಾಗಿದೆ. ಗ್ರಾಮಸ್ಥರ ಮನವಿಯಂತೆ ಅರ್ಧಕ್ಕೆ ನಿಂತಿರುವ ಅಂಬೇಡ್ಕರ್ ಭವನ ಪೂರ್ಣಗೊಳಿಸಿ, ಗ್ರಾಮದಲ್ಲಿ ಬೃಹತ್ ಗ್ರಂಥಾಲಯ ಸ್ಥಾಪನೆ ಹಾಗೂ ಶಾಲಾ ಕಾಂಪೌಂಡ್ ನಿರ್ಮಾಣ ಮಾಡಲಾಗುವುದು. ಇದಕ್ಕೆ ಗ್ರಾಮಸ್ಥರು ಸಹಕಾರ ನೀಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಶಿವಸ್ವಾಮಿ, ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷ ಕರಿಯಯ್ಯ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಮಹೇಶ್, ವಕೀಲ ಮಹೇಶ್, ಯಜಮಾನರಾದ ಚಿಕ್ಕತಮ್ಮಯ್ಯ, ಸಹಾಯಕ ಪ್ರಾಧ್ಯಾಪಕ ಡಾ.ಶೇಖರ್, ಶಿಕ್ಷಕರು ಮಹೇಶ್, ಮಹೇಶ್ವರಿ, ಜಗದೀಶ್, ಶೇಖರ್, ಮಹೇಶ್, ಸಿದ್ದರಾಜು ಹೊರೆಯಾಲ, ಮಹದೇವಸ್ವಾಮಿ ಚೆನ್ನವಡೆಯನಪುರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-37-2136686443

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.