ಗುಂಡ್ಲುಪೇಟೆ: ‘ಪ್ರಚೋದನಕಾರಿ ಭಾಷಣ ಮಾಡಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಬಂಧಿಸಬೇಕೆಂದು’ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ದೂರು ನೀಡಿತು.

ಪಟ್ಟಣದ ಪೊಲೀಸ್ ಠಾಣೆ ಮುಂದೆ ಜಮಾವಣೆಗೊಂಡು ಪಿಐ ಜಯಕುಮಾರ್ಗೆ ದೂರು ಸಲ್ಲಿಸಲಾಯಿತು.

‘ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ನಮಾಜ್ ಮಾಡುವ ಸಂದರ್ಭದಲ್ಲಿ ವಿಷ ಸರ್ಪ ಕಂಡರೆ ಅದನ್ನು ಕೊಲ್ಲಬೇಕು ಎಂದು ಕುರಾನ್ನಲ್ಲಿ ಬರೆದಿದೆ. ಅದೇ ರೀತಿಯ ಬಿಜೆಪಿ, ಆರ್ಎಸ್ಎಸ್ ಎಂಬ ವಿಷ ಸರ್ಪವನ್ನು ಕೊಲ್ಲದಿದ್ದರೆ ನೀವು ಬದುಕುವುದಿಲ್ಲ ಎಂದು ಮುಸಲ್ಮಾನರಿಗೆ ಕರೆ ನೀಡಿದ್ದು, ಬಿಜೆಪಿ, ಆರ್ಎಸ್ಎಸ್ ಸದಸ್ಯರನ್ನು ಕೊಲ್ಲಬೇಕು ಎಂದು ಪ್ರಚೋದಿಸಿದ್ದಾರೆ’ ಎಂದು ದೂರಿದರು.

‘ಮಲ್ಲಿಕಾರ್ಜುನ ಖರ್ಗೆ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದಾರೆ. ಇಂತಹ ಪ್ರಚೋದನಕಾರಿ ಭಾಷಣ ದೇಶದಲ್ಲಿರುವ ಲಕ್ಷಾಂತರ ಬಿಜೆಪಿ ಮತ್ತು ಆರ್ಎಸ್ಎಸ್ ಸದಸ್ಯರ ಜೀವಕ್ಕೆ ಅಪಾಯವೊಡ್ಡಿದೆ. ಈ ಭಾಷಣ ದೇಶಾದ್ಯಂತ ಇರುವ ಸಂಘ ಪರಿವಾರದ ಮೇಲೆ ಮಾಡಿರುವ ದಾಳಿಯಾಗಿದೆ’ ಎಂದು ಆಕ್ರೋಶ ಹೊರ ಹಾಕಿದರು.

ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯು ಮತಿಗೇಡಿಗಳಿಗೆ ಉತ್ತೇಜನ ನೀಡಿದಂತೆ. ಇದರಿಂದ ನಮ್ಮ ಕಾರ್ಯಕರ್ತರ ಮೇಲೆ ದಾಳಿ ಸಂಭವಿಸಬಹುದಾಗಿದೆ. ಧಾರ್ಮಿಕ ಮತ್ತು ಸಮುದಾಯಗಳ ನಡುವಿನ ಸೌಹಾರ್ದತೆಗೆ ಸಂಬಂಧಿಸಿದ ಕಾಯ್ದೆ, ವಿವಿಧ ಧರ್ಮ, ಜನಾಂಗ, ಭಾಷೆ, ಪ್ರಾದೇಶಿಕ ಗುಂಪುಗಳು ಅಥವಾ ಸಮುದಾಯಗಳ ನಡುವೆ ದ್ವೇಷ, ಹಗೆತನ ಅಥವಾ ಕೆಟ್ಟ ಭಾವನೆಯನ್ನು ಉತ್ತೇಜಿಸುವುದನ್ನು ಇದು ನಿಷೇಧಿಸುತ್ತದೆ. ಹೀಗಾಗಿ ಕೂಡಲೇ ಖರ್ಗೆ ಬಂಧಿಸಬೇಕು ಎಂದು ಒತ್ತಾಯಿಸಿದರು.

ಯುವ ಮೋರ್ಚಾ ಅಧ್ಯಕ್ಷ ಶಿವಪ್ರಸಾದ್ ಗುರುವಿನಪುರ, ರಾಜ್ಯ ಸಂಚಾಲಕ ಎಚ್.ಎಂ.ಪ್ರಣಯ್, ಮಂಡಲ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಗರಗನಹಳ್ಳಿ, ಬಿಜೆಪಿ ಸಾಮಾಜಿಕ ಜಾಲತಾಣ ಜಿಲ್ಲಾ ಸಹ ಸಂಚಾಲಕ ಮಂಜು ಶಿವಪುರ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಹೇಶ್, ಪವನ್ ಬೆಳಚಲವಾಡಿ, ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ನಾಗೇಂದ್ರ ಪಾನು, ಸಾಗರ್ ಅಗತಗೌಡನಹಳ್ಳಿ, ಸಿದ್ದರಾಜು ಗರಗನಹಳ್ಳಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-37-1989930307

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.