ಗುಂಡ್ಲುಪೇಟೆ: ‘ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮಕ್ಕೆ ಮೂಲಸೌಲಭ್ಯ ಕಲ್ಪಿಸುವಲ್ಲಿ ಗ್ರಾಮ ಪಂಚಾಯಿತಿ ವಿಫಲವಾಗಿದೆ’ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಮಲ್ಲಯ್ಯನಪುರ ಗ್ರಾಮಕ್ಕೆ ಆಗಮಿಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಪಿಡಿಒ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ರೈತ ಮುಖಂಡ ವೀರನಪುರ ನಾಗಪ್ಪ ಮಾತನಾಡಿ, ‘ಕೂತನೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಮಲ್ಲಯ್ಯನಪುರ ಗ್ರಾಮಕ್ಕೆ ಚರಂಡಿ, ಕುಡಿಯುವ ನೀರು ಸೇರಿದಂತೆ ಇನ್ನಿತರ ಬೇಡಿಕೆಗಳ ಪಟ್ಟಿಯನ್ನು ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಹಲವು ವರ್ಷಗಳಿಂದ ಸಲ್ಲಿಸಿದ್ದರೂ ಮನವಿ ಕಸದ ಬುಟ್ಟಿ ಸೇರುತ್ತಿದೆ. ಜನಸಾಮಾನ್ಯರ ಬೇಕು ಬೇಡಗಳಿಗೆ ಸ್ಪಂದಿಸದ ಅಧಿಕಾರಿಗಳಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯವೇ’ ಎಂದು ಪ್ರಶ್ನಿಸಿದರು.

‘ಸ್ವತಂತ್ರ ಬಂದು 75 ವರ್ಷಗಳೇ ಕಳೆದರೂ ಇನ್ನೂ ಬೇಡುವ ಪರಿಸ್ಥಿತಿ ಬಂದೊದಗಿರುವುದು ಪ್ರಜಾಸತಾತ್ಮಕ ಆಡಳಿತ ವ್ಯವಸ್ಥೆಗಿಡಿದ ಕೈಗನ್ನಡಿಯಾಗಿದೆ. ಗ್ರಾಮಾಂತರ ಪ್ರದೇಶಗಳು ಅಭಿವೃದ್ಧಿ ಪಥದತ್ತ ಸಾಗಿದರೆ ದೇಶವೇ ಅಭಿವೃದ್ದಿಯಾದಂತೆ ಎಂಬ ಆಶಾಭಾವನೆ ಕೇವಲ ಘೋಷಣೆಗೆ ಮಾತ್ರವೇ ಎಂಬತಿದೆ. ಆಳುವ ಸರ್ಕಾರಗಳು ಲಕ್ಷ ಲಕ್ಷ ಹಣ ಬಿಡುಗಡೆ ಮಾಡಿದರೂ ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ’ ಎಂದು ಆರೋಪಿಸಿದರು.

‘ಸರ್ಕಾರವನ್ನೇ ರಚನೆ ಮಾಡಬಲ್ಲ ಮತದಾರರ ಸಮಸ್ಯೆಗೆ ಪರಿಹಾರ ಮಾರ್ಗ ಕಂಡುಕೊಳ್ಳಲಾಗದ ಅಸಮರ್ಥ ಅಧಿಕಾರಿಗಳ ವಿರುದ್ಧ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಉಗ್ರ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ರೈತ ಮುಖಂಡ ಪುಟ್ಟೇಗೌಡ ಸೇರಿದಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-37-469863953

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.