ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿಯಲ್ಲಿ ಕಾಡಾನೆ ದಾಳಿ ಮುಂದುವರೆದಿದ್ದು, ಭಾನುವಾರ ತಡರಾತ್ರಿ ದಾಂಧಲೆ ನಡೆಸಿ ತೆಂಗಿನ ಸಸಿ ಮತ್ತು ಟೊಮೆಟೊ ನಾಶಪಡಿಸಿದೆ.

ಕಳೆದ ಎರಡು ದಿನಗಳ ಹಿಂದೆ ಗ್ರಾಮದಲ್ಲಿ ಕಾಡಾನೆ ದಾಳಿ ನಡಸಿ ಟಮೋಟೊ ಮತ್ತು ಬಾಳೆ ಬೆಳೆ ನಾಶ ಪಡಿಸಿದ ಘಟನೆ ನಡೆದಿತ್ತು. ಇದೀಗ ಮಂಚಹಳ್ಳಿಯ ರೈತ ಮಹದೇವೆಗೌಡ ಎಂಬುವವರಿಗೆ ಸೇರಿದ ಸರ್ವೇ ನಂ- 138ರ ಜಮೀನಿಗೆ ದಾಳಿಯಿಟ್ಟು ಬೆಳೆ ನಾಶಪಡಿಸಿದೆ.

ಕಳೆದ ಮೂರು ತಿಂಗಳಲ್ಲಿ ಸುಮಾರು 16 ಬಾರಿ ದಾಳಿ ನಡೆಸಿವೆ. ದಾಳಿಗೆ ಟೊಮೆಟೊ, ಬಾಳೆ ಹಾಗೂ ಸೋಲಾರ್ ತಂತಿ ನಾಶಪಡಿಸಿದ್ದರಿಂದ ರೈತರಿಗೆ ಲಕ್ಷಾಂತರ ಹಣ ನಷ್ಟ ಉಂಟಾಗಿದ್ದು, ಕೃಷಿ ಚಟುವಟಿಕೆಗಳನ್ನು ನಡೆಸಲು ರೈತರು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ.

ರೈಲ್ವೆ ಬ್ಯಾರಿಕೇಡ್ ದಾಟಿ ಬಂದು ದಾಂಧಲೆ ನಡೆಸುತ್ತಿರುವ ಕಾಡಾನೆ ಹಿಂಡಿನ ದಾಳಿಗೆ ಅನ್ನದಾತ ರೈತರು ರೋಸಿ ಹೋಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ನಿಯಂತ್ರಿಸಲು ಸೂಕ್ತ ಕ್ರಮವಹಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಬಂಡೀಪುರದ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ವಲಯ ಅರಣ್ಯ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-37-114381044

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.