ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ-ಮೈಸೂರು ರಾಷ್ಟ್ರೀಯ ಹೆದ್ದಾರಿ-766ರ ಹಿರೀಕಾಟಿ ಗೇಟ್ ಸಮೀಪ ಈಚೆಗೆ ದರೋಡೆಕೋರರ ತಂಡವೊಂದು ಕೇರಳ ಮೂಲದ ವ್ಯಕ್ತಿಯೊಬ್ಬರ ಕಾರು ಅಡ್ಡಗಟ್ಡಿ ಅಪಹರಿಸಿ ಮೊಬೈಲ್ ಫೋನ್, ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡ್ಗಳನ್ನು ಕಸಿದು ಪರಾರಿಯಾಗಿದ್ದಾರೆ.

ತಾಲ್ಲೂಕಿನ ಹಿರೀಕಾಟಿ ಗೇಟ್ ಸಮೀಪ ಮೇ 21ರ ಸಂಜೆ 7ರ ಸಮಯದಲ್ಲಿ ಕೇರಳದ ಸುಲ್ತಾನ್ ಬತ್ತೇರಿಯ ಅಬ್ರಿಕೊ ಟ್ರಾನ್ಸ್ ಪೋರ್ಟ್ ಕಂಪನಿಯ ಮ್ಯಾನೇಜರ್ ಆಸೀಫ್ ಅವರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಾರಿನ ಗಾಜು ಹೊಡೆದು ಕಾರಿನ ಸಮೇತ ಅವರನ್ನು ಅಪಹರಿಸಿದ್ದಾರೆ.

ನಂಜನಗೂಡು-ನರಸೀಪುರ ರಸ್ತೆಗೆ ಕಾರನ್ನು ಕೊಂಡೊಯ್ದು ಹಣಕ್ಕಾಗಿ ತಡಕಾಡಿದ್ದಾರೆ. ಹಣ ಸಿಗದ ಹಿನ್ನೆಲೆಯಲ್ಲಿ ಆಸೀಫ್ ಅವರ ಮೊಬೈಲ್, ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ಗಳನ್ನು ಕಸಿದು ಮಾರ್ಗ ಮಧ್ಯೆಯೇ ಅವರನ್ನು ಕೆಳಗಿಳಿಸಿ ಪರಾರಿಯಾಗಿದ್ದಾರೆ. ಆಸೀಫ್ ಕಾರು ಆಲಂಬೂರು ಕಾಲುವೆ ಬಳಿ ಪತ್ತೆಯಾಗಿದೆ.

ಆಸೀಫ್ ಕೆಲಸದ ನಿಮಿತ್ತ ಮೈಸೂರಿನ ಬಂಡಿಪಾಳ್ಯದ ಕಚೇರಿ ಆಗಾಗ ಬಂದು ಹೋಗತ್ತಿದ್ದರು. ಇದನ್ನು ಗಮನಿಸಿದ್ದ ದುಷ್ಕರ್ಮಿಗಳು ಹಣ ದರೋಡೆಗೆ ಸಂಚು ರೂಪಿಸಿದ್ದರು ಎಂದು ತಿಳಿದು ಬಂದಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜ್ ದರೋಡೆ ನಡೆದ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ,

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-37-570976357

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.