ಗುಂಡ್ಲುಪೇಟೆ: ತಾಲ್ಲೂಕಿನ ಪರಮಾಪುರ ಗ್ರಾಮದಲ್ಲಿ ಬಸವ ಜಯಂತಿಯನ್ನು ಅದ್ದೂರಿಯಿಂದ ಆಚರಿಸಲಾಯಿತು.

ಗ್ರಾಮದ ಬಸವೇಶ್ವರ ದೇವಸ್ಥಾನದ ಮುಂಭಾಗ ಬೆಳ್ಳಿ ಪಲ್ಲಕ್ಕಿಯಲ್ಲಿ ಬಸವೇಶ್ವರ ಪುತ್ಥಳಿಯನ್ನು ಇಟ್ಟು ಪೂಜಿಸುವ ಮೂಲಕ ಬಸವ ಜಯಂತಿ ಮೆರವಣಿಗೆಗೆ ಗ್ರಾಮದ ಮುಖಂಡರು ಚಾಲನೆ ನೀಡಿದರು. ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.

ವೀರಗಾಸೆಯವರ ಕುಣಿತ ಮತ್ತು ಡಿ.ಜೆ ಸದ್ದಿಗೆ ಯುವಕರು ಕುಣಿದು ಕುಪ್ಪಳಿಸಿದರು. ಮೆರವಣಿಗೆ ವೇಳೆ ಮಹಿಳೆಯರು ಪೂಜೆ ಸಲ್ಲಿಸಿ ದರ್ಶನ ಪಡೆದರು. ಬಸವ ಜಯಂತಿ ನಿಮಿತ್ತ ಗ್ರಾಮವನ್ನು ವಿದ್ಯುತ್ ಮತ್ತು ತಳಿರು ತೋರಣಗಳಿಂದ ಅಲಂಕಾರ ಮಾಡಲಾಗಿತ್ತು.

ಗ್ರಾಮದ ಹಿರಿಯ ಮುಖಂಡರಾದ ಗೌಡಿಕೆ ಗುರುಮಲ್ಲಪ್ಪ, ಶಿವಪ್ಪ, ಎಂಪಿಸಿಎಸ್ ಅಧ್ಯಕ್ಷ ರೇವಣ್ಣ, ಶಿವನಂಜಪ್ಪ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಾಗಭೂಷಣ್, ಗುರುಶಾಂತಪ್ಪ, ಪರಶಿವಪ್ಪ, ಕುಮಾರ, ಮಧು ಕಬ್ಬಳ್ಳಿ ಬಸಪ್ಪ ಹಾಗೂ ಗ್ರಾಮಸ್ಥರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-37-1272116727

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.