ಗುಂಡ್ಲುಪೇಟೆ: ಪಟ್ಟಣದ ಅಧಿದೇವತೆ ಪಟ್ಟಲದಮ್ಮನ ಜಾತ್ರಾ ಮಹೋತ್ಸವ ಶನಿವಾರ ವಿಜೃಂಭಣೆಯಿಂದ ನಡೆಯಿತು. ನಾಯಕ ಸಮುದಾಯದ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಭಾಗವಹಿಸಿದ್ದರು.

ದೇವಾಲಯವನ್ನು ಜಾತ್ರೆ ಹಿನ್ನೆಲೆಯಲ್ಲಿ ಬಣ್ಣ ಬಳಿದು, ತಳಿರು, ತೋರಣ, ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ರಾಷ್ಟ್ರೀಯ ಹೆದ್ದಾರಿ-766, ವೀರಮದಕರಿ ನಾಯಕ ವೃತ್ತ, ಇತರೆ ಕಡೆಗಳಲ್ಲಿ ವಿಶೇಷ ದೀಪಾಲಂಕಾರ ಮಾಡಲಾಗಿತ್ತು. ಪಟ್ಟಲದಮ್ಮ ಮತ್ತು ಮಹರ್ಷಿ ವಾಲ್ಮೀಕಿ ಬೃಹತ್ ಭಾವಚಿತ್ರಗಳು ಬೆಳಕಿನಿಂದ ಜಗಮಗಿಸಿದವು.

ಬೆಳಿಗ್ಗೆಯಿಂದಲೇ ಅರ್ಚಕರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ನೆರವೇರಿದವು. ಭಕ್ತರು ಸರದಿ ಸಾಲಿನಲ್ಲಿ ನಿಂತು ಪೂಜೆ ಸಲ್ಲಿಸಿದರು. ಪ್ರಸಾದ ವಿತರಿಸಲಾಯಿತು.

ಮೆರವಣಿಗೆ: ದೇವಾಲಯ ಆವರಣದಲ್ಲಿ ಅಲಂಕೃತ ಬೆಳ್ಳಿರಥದಲ್ಲಿ ಉತ್ಸವ ಮೂರ್ತಿ ಇರಿಸಿ ಪೂಜೆ ಸಲ್ಲಿಸಲಾಯಿತು. ಪೂರ್ಣಕುಂಭ, ನಗಾರಿ, ಬ್ಯಾಂಡ್, ಚೆಂಡೆ, ಗಾರುಡಿಗೊಂಬೆ, ಸಿದ್ದಪ್ಪಾಜಿ, ಶ್ರೀರಾಮ, ಆಂಜನೇಯ ದೇವರುಗಳ ವೇಷಧಾರಿಗಳೊಂದಿಗೆ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಿತು.

ರಸ್ತೆ ಹಿಕ್ಕೆಲಗಳಲ್ಲಿ ಸಾವಿರ ಸಂಖ್ಯೆಯ ಭಕ್ತರು, ಕಟ್ಟಡಗಳ ಮೇಲಿದ್ದು, ಜೈಕಾರ ಮೊಳಗಿಸಿದರು. ಕತ್ತಲಾದರೂ ಕಲಾತಂಡಗಳ ತಾಳಕ್ಕೆ ಯುವಕರು ಮತ್ತು ಮಕ್ಕಳು ನೃತ್ಯ ಮಾಡಿ ಸಂಭ್ರಮಿಸಿದರು.

ಶಾಸಕ ಭಾಗಿ: ಪಟ್ಟಲದಮ್ಮ ದೇವಸ್ಥಾನಕ್ಕೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಬೆಂಬಲಿಗರೊಂದಿಗೆ ಭೇಟಿ ನೀಡಿ, ದೇವರಿಗೆ ಪೂಜೆ ಸಲ್ಲಿಸಿದರು. ನಾಯಕ ಸಮುದಾಯದವರು ಅವರನ್ನು ಸನ್ಮಾನಿಸಿದರು. ಪುರಸಭೆ ಮಾಜಿ ಅಧ್ಯಕ್ಷ ಶಶಿಧರ್ ಪಿ.ದೀಪು, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್, ಜಿಪಂ ಮಾಜಿ ಸದಸ್ಯ ಕಬ್ಬಹಳ್ಳಿ ಮಹೇಶ್ ಜೊತೆಗಿದ್ದರು.

ಸಮುದಾಯದ ಮುಖಂಡರಾದ ಎನ್.ಮಲ್ಲೇಶ್, ಪುರಸಭೆ ಮಾಜಿ ಅಧ್ಯಕ್ಷ ಪಿ.ಗಿರೀಶ್ ಜಾತ್ರಾ ಮಹೋತ್ಸವದ ನೇತೃತ್ವ ವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-37-1966588083

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.