ಗುಂಡ್ಲುಪೇಟೆ: ಪಟ್ಟಣದ ಕೆ.ಎಸ್.ನಾಗರತ್ನಮ್ಮ ಬಡಾವಣೆ, ಮಡಹಳ್ಳಿ ಸರ್ಕಲ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಲಾಕ್ಡ್ ಹೌಸ್ ಬೀಟ್ ಸಿಸ್ಟಂ ಕುರಿತು ಗುಂಡ್ಲುಪೇಟೆ ಠಾಣೆ ಪೊಲೀಸರು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.

ಸಾರ್ವಜನಿಕರು ತಮ್ಮ ಮನೆಗೆ ಕೀಲಿ ಹಾಕಿಕೊಂಡು ಹೋದ ಸಂದರ್ಭದಲ್ಲಿ ಕಳ್ಳರು ಅಂತಹ ಮನೆಗಳನ್ನು ಗುರುತಿಸಿ ಕಳವು ಮಾಡುವುದನ್ನು ಗಮನಿಸಿದ್ದೇವೆ. ಈ ಸಂಬಂಧ ಪೊಲೀಸ್ ಇಲಾಖೆಯು ಮನೆಯಲ್ಲಿ ಕಳ್ಳತನದಂತಹ ಕೃತ್ಯಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ಉದ್ದೇಶದಿಂದ ಲಾಕ್ಡ್ ಹೌಸ್ ಬೀಟ್ ಸಿಸ್ಟಂ ಅನ್ನು ಜಾರಿಗೆ ತಂದಿದೆ ಎಂದು ಪ್ರೊಬೇಷನರಿ ಪಿ.ಎಸ್.ಐ ಪುರುಷೋತ್ತಮ್ ತಿಳಿಸಿದರು.

ಯಾರೂ ಇಲ್ಲದೇ ತಾತ್ಕಾಲಿಕ ಲಾಕ್ ಆಗಿರುವ ಮನೆಗಳ ಮೇಲೆ ಪೊಲೀಸರು ವಿಶೇಷ ನಿಗಾ ಇರಿಸಲಿದ್ದಾರೆ. ಆ ಮನೆ ಇರುವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಯಾ ಠಾಣಾ ಬೀಟ್ ಸಿಬಂದಿಯು ಆ ಮನೆಗೆ ಭೇಟಿ ನೀಡಿ ರಾತ್ರಿ ಮತ್ತು ಹಗಲು ವೇಳೆ ಆ ಮನೆಯ ಭದ್ರತೆ ಮತ್ತು ಸುರಕ್ಷತೆ ಖಚಿತಪಡಿಸಲಿದ್ದಾರೆ. ಸಾರ್ವಜನಿಕರು ತಮ್ಮ ಮನೆಗಳಿಗೆ ಕೀಲಿ ಹಾಕಿಕೊಂಡು ಹೋಗುವ ಸಂದರ್ಭದಲ್ಲಿ ಪೊಲೀಸ್ ಠಾಣೆಗೆ ತಮ್ಮ ಹೆಸರು, ಮನೆಯ ವಿಳಾಸ, ಮನೆಯ ಜಿಪಿಎಸ್ ವಿವರ, ಮನೆಯ ಫೋಟೊ, ಮನೆಯಿಂದ ಹೊರ ಹೋಗುವ ಒಟ್ಟು ಅವಧಿ ಒಳಗೊಂಡ ಮಾಹಿತಿಯನ್ನು ಇಲಾಖೆಯೊಂದಿಗೆ ವಿನಿಯಮ ಮಾಡಿಕೊಳ್ಳಬೇಕು. ಸಾರ್ವಜನಿಕರು ಹಂಚಿಕೊಂಡ ಮಾಹಿತಿಯ ವಿವರದ ಗೋಪ್ಯತೆ ಕಾಪಾಡಲಾಗುವುದು ಎಂದು ಹೇಳಿದರು.

ಈ ಸೌಲಭ್ಯವು ಕೇವಲ ಸ್ವಂತ, ವೈಯಕ್ತಿಕ ಮನೆಗಳಿಗೆ ಮಾತ್ರ ಲಭ್ಯವಿದ್ದು, ಬಹುಮಹಡಿ ಫ್ಲ್ಯಾಟ್ಗಳಿಗೆ (ಅಪಾರ್ಟ್ಮೆಂಟ್) ಅನ್ವಯಿಸುವುದಿಲ್ಲ. ಯಾವುದೇ ಅಧಿಕೃತವಲ್ಲದ ಅಥವಾ ಅಪರಿಚಿತ ಸಂಖ್ಯೆಗಳೊಂದಿಗೆ ನಿಮ್ಮ ಮನೆಯ ವಿವರ ಹಾಗೂ ಮಾಹಿತಿ ಹಂಚಿಕೊಳ್ಳದಂತೆ ಮನವಿ ಮಾಡಿದರು.

ಗುಂಡ್ಲುಪೇಟೆ ಠಾಣೆ ಪ್ರೊಬೇಷನರಿ ಪಿ.ಎಸ್.ಐ ಮುತ್ತಪ್ಪ ಸೇರಿದಂತೆ ರೈತರು, ಸಾರ್ವಜನಿಕರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-37-1353590006

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.