ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಎರಡು ದಿನದ ಮಳೆಗೆ ಬಾಳೆ ಫಸಲಿಗೆ ಅಪಾರ ಹಾನಿಯಾಗಿದ್ದು, ಜಿಲ್ಲಾಡಳಿತ ಮತ್ತು ಸರ್ಕಾರ ಕೂಡಲೇ ವೈಜ್ಞಾನಿಕ ಬೆಳೆ ನಷ್ಟ ಪರಿಹಾರ ನೀಡಬೇಕು ಎಂದು ಸಾಮೂಹಿಕ ನಾಯಕತ್ವದ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಒತ್ತಾಯಿಸಿದರು.

ತಾಲ್ಲೂಕಿನ ಬೊಮ್ಮಲಾಪುರ, ಶಿವಪುರ ಮತ್ತಿತ್ತರ ಗ್ರಾಮಗಳ ರೈತರ ಜಮೀನುಗಳಿಗೆ ಭೇಟಿ ನೀಡಿ ವಸ್ತು ಸ್ಥಿತಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೊನ್ನೂರು ಪ್ರಕಾಶ್, ರೈತನಿಗೆ ಈ ಬಾರಿ ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ. ರೈತನಿಗೆ ಸಮರ್ಪಕವಾದ ಪರಿಹಾರ ನೀಡಬೇಕು. ಸೂಕ್ತ ಪರಿಹಾರ ನೀಡದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ರೈತರು ಹಾಗೂ ರೈತ ಸಂಘಟನೆ ಮುಖಂಡರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-37-782060098

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.