ಗುಂಡ್ಲುಪೇಟೆ: ತಾಲ್ಲೂಕಿನ ನಿವೃತ್ತ ಯೋಧರಿಗೆ ಜಯ ಕರ್ನಾಟಕ ರಕ್ಷಣಾ ಸೇನೆ ವತಿಯಿಂದ ಸನ್ಮಾನಿಸಲಾಯಿತು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಿವೃತ್ತ ಯೋಧ ಕುಬ್ಬೆಪುರ ಗ್ರಾಮದ ಕೆ.ಆರ್.ಶಿವಣ್ಣ ಹಾಗೂ ಗೋಪಾಲಪುರ ಗ್ರಾಮದ ಕೆ.ಸಿ ನಾಗಪ್ಪ ಅವರನ್ನು ಸನ್ಮಾನಿಸಿ ಮಾತನಾಡಿದ ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷರಾದ ಪುಟ್ಟಮ್ಮ, ನಿವೃತ್ತ ಯೋಧರಿಗೆ ಸರ್ಕಾರದ ವತಿಯಿಂದ ಸಿಗುವ ಸವಲತ್ತುಗಳನ್ನು ಶೀಘ್ರ ತಲುಪಿಸಬೇಕು ಎಂದು ತಿಳಿಸಿದರು.

ಸಂಘಟನೆ ಜಿಲ್ಲಾಧ್ಯಕ್ಷ ಈಶ್ವರ್ ಮಾತನಾಡಿ, ಯೋಧರ 25 ವರ್ಷದ ಸುದೀರ್ಘ ಸೇವೆಯನ್ನು ಪರಿಗಣಿಸಿ ಗೌರವ ಸಮರ್ಪಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು. ಸಾಹಿತಿ ಕಾಳಿಂಗ ಸ್ವಾಮಿ ಸಿದ್ದಾರ್ಥ್ ಮಾತನಾಡಿ, ಯೋಧರು ದೇಶದ ಬೆನ್ನೆಲುಬು ಎಂದು ಬಣ್ಣಿಸಿದರು.

ಈ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆ ತಾಲ್ಲೂಕು ಅಧ್ಯಕ್ಷ ಸೈಯದ್ ಅನ್ಸರ್, ಜಿಲ್ಲಾ ಉಪಾಧ್ಯಕ್ಷ ಬೆಳವಾಡಿ ರಾಜಪ್ಪ, ಜಿಲ್ಲಾ ಕಾರ್ಯದರ್ಶಿ ಬೊಮ್ಮನಹಳ್ಳಿ ಮಂಜುನಾಥ್, ಯುವ ಘಟಕದ ಅಧ್ಯಕ್ಷ ಮಲ್ಲು ಗಜ, ತಾಲ್ಲೂಕು ಉಪಾಧ್ಯಕ್ಷ ಪ್ರಸಾದ್, ಚಾಮರಾಜನಗರ ತಾಲ್ಲೂಕು ಅಧ್ಯಕ್ಷರಾದ ಸವಿತಾ, ಉಪಾಧ್ಯಕ್ಷರಾದ ಉತ್ತರಾಜಮ್ಮ, ಟೌನ್ ಅಧ್ಯಕ್ಷ ಅಜಿತ್ ಕುಮಾರ್, ಉಪಾಧ್ಯಕ್ಷ ಗುರುಪ್ರಸಾದ್, ಕಾವಲು ಪಡೆ ಗೌರವಾಧ್ಯಕ್ಷ ರಾಮೇಗೌಡ, ರಾಜು, ಗ್ರಾಪಂ ಮಾಜಿ ಅಧ್ಯಕ್ಷ ದೇವರಾಜು, ಗವಿಸ್ವಾಮಿ, ಕಾಂತರಾಜ್ ಮೌರ್ಯ, ಕನ್ನೇಗಾಲ ಮನಸ್ಸು, ಎಸ್.ಮುಬಾರಕ್ ಸೇರಿದಂತೆ ಸಂಘಟನೆ ಪದಾಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-37-1901758965

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.