ಗುಂಡ್ಲುಪೇಟೆ: ‘ಗ್ರಾಮೀಣ ಪ್ರದೇಶದ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಲೋಕೋಪಯೋಗಿ ಸಚಿವರಿಗೆ ವಿಶೇಷ ಅನುದಾನಕ್ಕೆ ಮನವಿ ಮಾಡಲಾಗಿದೆ’ ಎಂದು ಶಾಸಕ ಎಚ್.ಎಂ.ಗಣೇಶಪ್ರಸಾದ್ ತಿಳಿಸಿದರು.

ತಾಲ್ಲೂಕಿನ ಕಮರಹಳ್ಳಿಯಲ್ಲಿ 2024-2025ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಬರುವ ಬೇಗೂರಿನಿಂದ ಕೌಲಂದೆ ಹೋಗುವ ರಸ್ತೆಗೆ ಅಂದಾಜು ₹2 ಕೋಟಿ 50 ಲಕ್ಷ ಅನುದಾನದ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

‘ಹದಗೆಟ್ಟ ರಸ್ತೆ ಹಾಗೂ ಲೋಕೋಪಯೋಗಿ ಇಲಾಖೆ ರಸ್ತೆಗಳ ನಿರ್ಮಾಣಕ್ಕೆ ಆದ್ಯತೆ ನೀಡುತ್ತಿದೆ. ಏ.21ರಂದು ತಾಲ್ಲೂಕಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದು, ಇವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಸೇರಿದಂತೆ ಹಲವು ಮಂದಿ ಸಚಿವರು ಆಗಮಿಸಿ ಅಭಿವೃದ್ದಿ ಕಾರ್ಯಗಳನ್ನು ಉದ್ಘಾಟಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಸರ್ಕಾರದಿಂದ ಮತ್ತಷ್ಟು ಅನುದಾನ ತಂದು ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗುತ್ತದೆ’ ಎಂದು ಹೇಳಿದರು.

ಚಾಲನೆ: 2024-2025ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಲೋಕೋಪಯೋಗಿ ಇಲಾಖೆಗೆ ಅಂದಾಜು ₹20 ಕೋಟಿ ಮೀಸಲಿಟ್ಟಿರುವ ಅನುದಾನದಲ್ಲಿ ಹಳೇಪುರ ಗ್ರಾಮದಲ್ಲಿ ಸಂಗೇಗೌಡನಹುಂಡಿ ಕ್ರಾಸ್ನಿಂದ ಪಡಗೂರು ಮಾರ್ಗವಾಗಿ ಪರಮಪುರ ಸೇರುವ ರಸ್ತೆಗೆ ಅಂದಾಜು ₹2 ಕೋಟಿ 50 ಲಕ್ಷ ಅನುದಾನದಲ್ಲಿ ರಸ್ತೆ ಕಾಮಗಾರಿಗೆ ಭೂಮಿಪೂಜೆ. ತೆರಕಣಾಂಬಿ ಗ್ರಾಮದಿಂದ ಚಾಮರಾಜನಗರಕ್ಕೆ ಹೋಗುವ ರಸ್ತೆಯ ಪ್ಯಾಚ್ ವರ್ಕ್ ಕಾಮಗಾರಿಗೆ ಅಂದಾಜು ₹1 ಕೋಟಿ ಅನುದಾನದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ಮತ್ತು ಕೆ.ಕೆ.ಹುಂಡಿ ಗ್ರಾಮದಲ್ಲಿ ಚಿರಕನಹಳ್ಳಿಯಿಂದ ಕುರುಬರಹುಂಡಿ, ವಡ್ಡಗೆರೆ, ಕರಕಲಮಾದಹಳ್ಳಿ ಮಾರ್ಗವಾಗಿ ಕೆ.ಕೆ ಹುಂಡಿಗೆ ಸೇರುವ ರಸ್ತೆಗೆ ಅಂದಾಜು ₹2 ಕೋಟಿ ಅನುದಾನದಲ್ಲಿ ರಸ್ತೆ ಕಾಮಗಾರಿಗೆ ಶಾಸಕರು ಭೂಮಿಪೂಜೆ ನೆರವೇರಿಸಿದರು.

ಲೋಕೋಪಯೋಗಿ ಇಲಾಖೆಯ ಎಇಇ ರವಿಕುಮಾರ್, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪಿ.ಮಹದೇವಪ್ಪ, ತಾಪಂ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಮಹದೇವಸ್ವಾಮಿ, ತೆರಕಣಾಂಬಿ ಗ್ರಾಪಂ ಮಾಜಿ ಅಧ್ಯಕ್ಷ ನಾರಾಯಣನಾಯಕ, ಮಹದೇವನಾಯಕ, ಮಾಜಿ ಸದಸ್ಯರಾದ ಸ್ವಾಮಿ, ಜಲೇಂದ್ರ, ಮುಖಂಡರಾದ ಟಿ.ಪಿ.ನಾಗರಾಜು, ಚಿನ್ನಸ್ವಾಮಪ್ಪ, ಮನು, ಆನಂದನಾಯಕ, ಸದಾಶಿವಪ್ಪ, ಚಂದ್ರಶೇಖರ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-37-1009299193

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.