ಗುಂಡ್ಲುಪೇಟೆ: ತಾಲ್ಲೂಕು ಮಟ್ಟದ ಎಸ್ಸಿ, ಎಸ್ಟಿ ಹಿತರಕ್ಷಣಾ ಸಮಿತಿ ಸಭೆ ನಡೆಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ಕುಮಾರ್ ಅವರಿಗೆ ಜಾರಕಿಹೊಳಿ ಬ್ರಿಗೇಡ್ ಸಂಘಟನೆಯವರು ಮನವಿ ಸಲ್ಲಿಸಿದರು.

ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ಕಚೇರಿ ಮುಂದೆ ಮನವಿ ಸಲ್ಲಿಸಿ ಮಾತನಾಡಿದ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ಗೋವಿನಾಯಕ್, ‘ಸರ್ಕಾರದ ಆದೇಶದಂತೆ ಪ್ರತಿ 3 ತಿಂಗಳಿಗೊಮ್ಮೆ ಸಭೆ ನಡೆಸಬೇಕು. 2 ವರ್ಷಗಳಿಂದ ಕೇವಲ 2 ಬಾರಿ ಮಾತ್ರ ಸಭೆ ನಡೆಸಿರುವುದು ಈ ಸಮುದಾಯದವರ ಮೇಲಿನ ನಿರ್ಲಕ್ಷ್ಯ ಧೋರಣೆ ತೋರಿಸುತ್ತಿದೆ’ ಎಂದು ಅಸಮಾಧಾನ ಹೊರ ಹಾಕಿದರು.

‘ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿ ನಿಲಯಗಳಲ್ಲಿ ಅವ್ಯವಸ್ಥೆ ಬಗ್ಗೆ ದೂರು ನೀಡಿದರೂ ಯಾವುದೇ ಕ್ರಮವಹಿಸಿಲ್ಲ. ಆರ್ಟಿಇ ಅಡಿಯಲ್ಲಿ ವ್ಯಾಸಂಗ ಮಾಡುತ್ತಿರುವ 9–10ನೇ ತರಗತಿಯ ವಿದ್ಯಾರ್ಥಿಗಳಿಗೆ ಎರಡು ವರ್ಷ ಅದೇ ಶಾಲೆಯಲ್ಲಿ ಮುಂದುವರೆಸಬೇಕೆಂಬ ಆದೇಶ ಪಾಲನೆ ಮಾಡದ ಕಾರಣ ಶಾಲೆಗಳಲ್ಲಿ ಎಸ್ಸಿ, ಎಸ್ಟಿ ಮಕ್ಕಳಿಗೆ ತೊಂದರೆಯಾಗುತ್ತಿದೆ’ ಎಂದರು.

‘ತಾಲ್ಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿಗೆ ಮೀಸಲಾತಿಯನ್ನು ನೀಡದೆ ನೇಮಕಾತಿ ಮಾಡಿದೆ. ಪರಿಶಿಷ್ಟರ ಕೇರಿಗಳಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಮದ್ಯಮಾರಾಟವನ್ನು ತಡೆಯಲು ಅಬಕಾರಿ ಇಲಾಖೆಯು ಸಂಪೂರ್ಣ ವಿಫಲವಾಗಿದೆ. ಇಷ್ಟೆಲ್ಲ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ನಮಗೆ ವೇದಿಕೆ ಇಲ್ಲದಂತಾಗಿ ನಮ್ಮ ಹಕ್ಕುಚ್ಯುತಿಯಾಗುತ್ತಿದೆ. ಕೂಡಲೇ ಸಭೆ ನಡೆಸಬೇಕು’ ಎಂದು ಒತ್ತಾಯಿಸಿದರು.

ದಲಿತ ಸಂಘರ್ಷ ಸಮಿತಿಯ ಮಾಡ್ರಹಳ್ಳಿ ರಂಗಸ್ವಾಮಿ, ಗಿರೀಶ್, ರಾಜೇಂದ್ರ ನಾಯಕ್, ಮೋನಿ, ರವಿ, ಅರುಣ್, ಸುಕೃತ್, ಲಿಖಿತ್ ಎನ್.ನಾಯಕ, ಮಹೇಶ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-37-1925444246

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.