ಗುಂಡ್ಲುಪೇಟೆ: ಪುರಸಭೆ ವ್ಯಾಪ್ತಿಯ ಶ್ರೀರಾಮ ದೇವರ ಗುಡ್ಡದ ಪಕ್ಕದಲಿದ್ದ ಸುಮಾರು 25 ಸಾವಿರ ಟನ್ ಹಳೇ ಕಸದ ರಾಶಿಯನ್ನು ವೈಜ್ಞಾನಿಕ ವಿಲೇವಾರಿ ಮಾಡುವ ಕಾರ್ಯಕ್ಕೆ ಪುರಸಭೆ ಮುಖ್ಯಾಧಿಕಾರಿ ಶರವಣ ಚಾಲನೆ ನೀಡಿದರು.

ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕ ಆರೋಗ್ಯಕ್ಕೆ ಆದ್ಯತೆ ನೀಡಿ ಕಸ ವಿಲೇವಾರಿ ಘಟಕದಲ್ಲಿ ದಶಕಗಳಿಂದ ಶೇಖರಣೆಯಾಗಿದ್ದ ಕಸವನ್ನು ಸಂಪೂರ್ಣವಾಗಿ ತೆರವುಗೊಳಿಸುವ ಕಾರ್ಯ ಭರದಿಂದ ಸಾಗಿದೆ. ಜಿಲ್ಲಾ ನಗರಾಭಿವೃದ್ಧಿ ಕೋಶದ ವತಿಯಿಂದ ಟೆಂಡರ್ ಕರೆಯಲಾಗಿದ್ದು, ಈ ಘಟಕದಲ್ಲಿ ಸಂಗ್ರಹವಾಗಿರುವ ಸುಮಾರು 25 ಸಾವಿರ ಟನ್ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ, ಮರುಬಳಕೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಶರವಣ ತಿಳಿಸಿದರು.

ಕಸದ ರಾಶಿಯನ್ನು ತೆರವುಗೊಳಿಸುವುದರಿಂದ ಪರಿಸರಕ್ಕೆ ದೊಡ್ಡ ಮಟ್ಟದ ಕೊಡುಗೆ ಸಿಗಲಿದೆ. ಇದರಿಂದ ಅಂತರ್ಜಲ ಹಾಗೂ ಮಣ್ಣಿನ ಮಾಲಿನ್ಯ ತಡೆಗಟ್ಟಬಹುದು. ಗಾಳಿಯ ಗುಣಮಟ್ಟ ಸುಧಾರಿಸಿ, ದುರ್ವಾಸನೆ ಮತ್ತು ನೊಣಗಳ ಕಾಟದಿಂದ ಸ್ಥಳೀಯರಿಗೆ ಮುಕ್ತಿ ಸಿಗಲಿದೆ ಎಂದರು.

ಕಸ ವಿಲೇವಾರಿ ಕಾಮಗಾರಿಯನ್ನು ಅತ್ಯಂತ ಸ್ವಚ್ಛವಾಗಿ ಮತ್ತು ವ್ಯವಸ್ಥಿತವಾಗಿ ನಿರ್ವಹಿಸಬೇಕು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂದು ಶಾಸಕರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಅದರಂತೆ ಗುಣಮಟ್ಟದ ಕೆಲಸಕ್ಕೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ತ್ಯಾಜ್ಯ ವಿಂಗಡಣೆ ಮತ್ತು ಮರುಬಳಕೆ ವಿಧಾನ: ಕಸದಿಂದ ಬೇರ್ಪಡಿಸಲಾದ ಗುಣಮಟ್ಟದ ಗೊಬ್ಬರವನ್ನು ಪಟ್ಟಣದ ಸಾರ್ವಜನಿಕ ಉದ್ಯಾನಗಳ ನಿರ್ವಹಣೆಗೆ ಬಳಸಲಾಗುತ್ತಿದೆ. ಕಸದಿಂದ ಸಂಸ್ಕರಿಸಿದ ಮಣ್ಣನ್ನು ಅದೇ ಜಾಗದ ಫಲವತ್ತತೆ ಮತ್ತು ಮಣ್ಣಿನ ಪೋಷಕಾಂಶಗಳನ್ನು ವೃದ್ಧಿಸಲು ಮರುಬಳಕೆ ಮಾಡಲಾಗುತ್ತಿದೆ. ದಹನ ಮಾಡಬಹುದಾದ ಮರುಬಳಕೆಗೆ ಬಾರದ ಒಣ ತ್ಯಾಜ್ಯವನ್ನು ಸಿಮೆಂಟ್ ಕಾರ್ಖಾನೆಗಳಿಗೆ ಇಂಧನವಾಗಿ ಬಳಸಲು ಸುರಕ್ಷಿತವಾಗಿ ರವಾನಿಸಲಾಗುತ್ತಿದೆ ಎಂದು ತಿಳಿಸಿದರು.

ಕಟ್ಟುನಿಟ್ಟಿನ ಸೂಚನೆ: ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರಿಗೆ ನಿರ್ದಿಷ್ಟ ಅವಧಿಯೊಳಗೆ ಕೆಲಸ ಮುಗಿಸಬೇಕು. ಆ ಪ್ರದೇಶವು ಅರಣ್ಯ ವಲಯಕ್ಕೆ ಹತ್ತಿರವಿರುವುದರಿಂದ ಕೆಲಸ ಮಾಡುವ ಕಾರ್ಮಿಕರು ವನ್ಯಜೀವಿಗಳಿಂದ ಸುರಕ್ಷಿತವಾಗಿರಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳು ಮತ್ತು ವೈಯಕ್ತಿಕ ಸುರಕ್ಷತಾ ಸಾಧನಗಳನ್ನು ಬಳಸಬೇಕು ಎಂದು ಸೂಚಿಸಿದರು.

ಪುರಸಭೆಯ ಕಿರಿಯ ಎಂಜಿನಿಯರ್ ಮಂಜುನಾಥ್, ಪರಿಸರ ಎಂಜಿನಿಯರ್ ಮಹೇಶ್, ಹಿರಿಯ ಆರೋಗ್ಯ ನಿರೀಕ್ಷಕರಾದ ಸುಷ್ಮಾ, ಸಿದ್ದರಾಜು ಸೇರಿದಂತೆ ಇಲಾಖೆಯ ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-37-1151785252

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.