ಗುಂಡ್ಲುಪೇಟೆ: ತಾಲ್ಲೂಕಿನ ತೆರಕಣಾಂಬಿಯಲ್ಲಿ ಕುಂಬಾರ ಸಮುದಾಯದಿಂದ ರಾಮೋತ್ಸವ ಆಚರಿಸಲಾಯಿತು.

ರಾಮೋತ್ಸವದ ಹಿನ್ನೆಲೆಯಲ್ಲಿ ಸಮುದಾಯದ ರಾಮಮಂದಿರವನ್ನು ತಳಿರು, ತೋರಣ ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಶನಿವಾರ ಬೆಳಿಗ್ಗೆಯಿಂದಲೇ ರಾಮಮಂದಿರದಲ್ಲಿ ವಿಶೇಷ ಪೂಜೆ ಜರುಗಿತು.

ನಂತರ ಗ್ರಾಮದ ಲಕ್ಷ್ಮೀ ವರದರಾಜಸ್ವಾಮಿ ದೇವಾಲಯದಲ್ಲಿ ಶ್ರೀರಾಮ ದೇವರ ಉತ್ಸವ ಮೂರ್ತಿ ಇರಿಸಿ ಪೂಜೆ ಸಲ್ಲಿಸಲಾಯಿತು. ದೇವಾಲಯದ ಹೊರಗೆ ಸಿದ್ಧಗೊಳಿಸಿದ್ದ ಅಲಂಕೃತ ಅಡ್ಡಪಲ್ಲಕ್ಕಿಯಲ್ಲಿ ದೇವರ ಉತ್ಸವ ಮೂರ್ತಿ ಇರಿಸಿ ಪೂಜೆ ಸಲ್ಲಿಸಲಾಯಿತು.

ಗ್ರಾಮದ ಪ್ರಮುಖ ಬೀದಿಗಳಲ್ಲಿ ಶ್ರೀರಾಮದೇವರ ಮೂರ್ತಿಯ ಮೆರವಣಿಗೆ ನಡೆಯಿತು. ಮಂಗಳವಾದ್ಯ ಇತರೆ ಕಲಾತಂಡಗಳು ಮೆರವಣಿಗೆಗೆ ರಂಗು ತಂದವು. ಮೂಲಸ್ಥಾನದಲ್ಲಿ ಮೆರವಣಿಗೆ ಕೊನೆಗೊಂಡಿತು. ನಂತರ ಪ್ರಸಾದ ವಿನಿಯೋಗ ನೆರವೇರಿಸಲಾಯಿತು.

ಟಿ.ಎಸ್.ಸಂಪತ್ತು, ಶಿವಕುಮಾರ್, ಮಹದೇವಶೆಟ್ಟಿ, ಸಿದ್ದಶೆಟ್ಟಿ, ಸೋಮ ಶೇಖರ್, ರಾಮು, ಮಂಜು ನಾಥ್ ಬಾಚಹಳ್ಳಿ, ಮಾದಪ್ಪ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-37-1633788857

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.