ಗುಂಡ್ಲುಪೇಟೆ: ತಾಲ್ಲೂಕಿನ ಸಂಪಿಗೆಪುರ ಗ್ರಾಮದಲ್ಲಿ ಚಿರತೆ ದಾಳಿಗೆ ನಟರಾಜು ಎಂಬವರ ಹಸು ಮೃತಪಟ್ಟಿದೆ.

ಜಮೀನಿನಲ್ಲಿ ಮೇಯುತ್ತಿದ್ದ ದನದ ಮೇಲೆ ಚಿರತೆ ದಾಳಿ ನಡೆಸಿ ಸಾಯಿಸಿದೆ. ಮಾಲೀಕರು ತೀವ್ರ ನಷ್ಟ ಅನುಭವಿಸುವಂತಾಗಿದೆ.

ಪರಿಹಾರಕ್ಕೆ ಒತ್ತಾಯ: ಹಸುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿ ಸಾವಿರಾರು ರೂಪಾಯಿ ನಷ್ಟ ಉಂಟಾಗಿದೆ. ಅರಣ್ಯಾಧಿಕಾರಿಗಳು ಶೀಘ್ರ ಪರಿಹಾರ ದೊರಕಿಸಿಕೊಡಬೇಕೆಂದು ಮಾಲೀಕ ನಟರಾಜು ಒತ್ತಾಯಿಸಿದ್ದಾರೆ.

ಆಕ್ರೋಶ: ಚಿರತೆ ದಾಳಿಗೆ ಸಿಲುಕಿ ಹಸು ಮೃತಪಟ್ಟಿದ್ದರೂ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಬೋನ್ ಇಟ್ಟು ಚಿರತೆ ಸೆರೆ ಹಿಡಿಯಬೇಕು. ಇಲ್ಲದಿದ್ದರೆ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ರೈತ ಮುಖಂಡ ಸ್ವಾಮಪ್ಪ ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.