ಗುಂಡ್ಲುಪೇಟೆ: ‘ಜನನ ಸಂದರ್ಭದಲ್ಲೇ ಮಗುವಿನ ಆರೋಗ್ಯದ ಮೇಲೆ ನಿಗಾ ವಹಿಸಿ ಅವರನ್ನು ರೋಗಮುಕ್ತರನ್ನಾಗಿ ಮಾಡಬೇಕು’ ಎಂದು ಶಾಸಕ ಎಚ್.ಎಂ. ಗಣೇಶಪ್ರಸಾದ್ ಸಲಹೆ ನೀಡಿದರು.

ಬೇಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಸಹಯೋಗದಲ್ಲಿ ‘ಅಂಗನವಾಡಿ ಮಕ್ಕಳ ವಾಕ್ ಮತ್ತು ಶ್ರವಣ ತಪಾಸಣೆ ದ್ವಿತೀಯ ಹಂತದ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಮಗು ಹುಟ್ಟಿದ 6 ತಿಂಗಳೊಳಗೆ ಆರೋಗ್ಯ ಸಮಸ್ಯೆ ಗುರುತಿಸಿ ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ನೀಡಬೇಕು. ಇದರಿಂದ ಸಣ್ಣಪುಟ್ಟ ತೊಂದರೆಗಳು ನಿವಾರಣೆ ಆಗುತ್ತದೆ. ತಾಲ್ಲೂಕಿನ 307 ಅಂಗನವಾಡಿ ಕೇಂದ್ರಗಳಲ್ಲಿ 2,406 ಮಕ್ಕಳನ್ನು ಗುರುತಿಸಲಾಗಿದ್ದು, ಇವರ ಮೇಲೆ ನಿಗಾವಹಿಸಲು ಅಂಗನವಾಡಿ ಕಾರ್ಯಕರ್ತೆಯರಿಗೆ ಜವಾಬ್ದಾರಿ ನೀಡಲಾಗಿದೆ. ಸಮಸ್ಯೆ ಕಂಡು ಬಂದರೆ ವೈದ್ಯರನ್ನು ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಶಿಲ್ಪಾನಾಗ್, ತಹಶೀಲ್ದಾರ್ ತನ್ಮಯ್, ಜಿಲ್ಲಾ ಆರೋಗ್ಯಾಧಿಕಾರಿ ಚಿದಂಬರ, ಮಂಜುಳಾ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಲೀಂ ಪಾಷಾ, ಸಿಡಿಪಿಒ ಹೇಮಾವತಿ, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್, ಶಿಶು ಅಭಿವೃದ್ಧಿ ಇಲಾಖೆ ಮೇಲ್ವೀಚಾರಕಿ ರುದ್ರವ್ವ, ಸೋನಿಯಾ ಬೇಗಂ, ಅಂಗನವಾಡಿ, ಆಶಾ ಕಾರ್ಯಕರ್ತರು, ಬೇಗೂರು ಪ್ರಾಥಮಿಕ ಕೇಂದ್ರದ ಆರೋಗ್ಯ ಸಿಬ್ಬಂದಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.