ಸರಗೂರು: ತಾಲ್ಲೂಕಿನ ಹಾದನೂರು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ಹುಲಿ ಕಾಣಿಸಿಕೊಂಡಿದ್ದು, ಆತಂಕಗೊಂಡ ಗ್ರಾಮಸ್ಥರು, ಹುಲಿ ಸೆರೆಗೆ ಅರಣ್ಯ ಇಲಾಖೆ ಕೂಡಲೇ ಕ್ರಮವಹಿಸಬೇಕೆಂದು ಒತ್ತಾಯಿಸಿದರು.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ನಂದದೇವರಬೆಟ್ಟ ವ್ಯಾಪ್ತಿಯ ಕಾಡಂಚಿನ ಜಮೀನಲ್ಲಿ15 ದಿನಗಳಿಂದ 15 ಕ್ಕೂ ಹೆಚ್ಚು ಜಾನುವಾರುಗಳನ್ನು ಕೊಂದಿರುವ ಹುಲಿ ಕಾಣಿಸಿದ್ದರಿಂದ ಗ್ರಾಮಸ್ಥರು , ‘ಹುಲಿ ಸೆರೆಗೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ’ ಎಂದು ಇಲಾಖೆ ವಿರುದ್ಧ ಆಕ್ರೋಶವ್ಯಕ್ತಪಡಿಸಿದರು. ಹುಲಿಯ ಸಂಚಾರದ ದೃಶ್ಯವನ್ನು ಗ್ರಾಮಸ್ಥರು ಸೆರೆ ಹಿಡಿದಿದ್ದು, ಅರಣ್ಯ ಇಲಾಖೆ ಕೂಡಲೇ ಸೆರೆ ಹಿಡಿದು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಬೇಕು ಎಂದು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-38-1612311383

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.