ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹನುಮದ್‌ ವ್ರತ: ಶ್ರದ್ಧಾ ಭಕ್ತಿಯ ಆಚರಣೆ

ಆಂಜನೇಯ ದೇವಾಲಯಗಳಲ್ಲಿ ವಿಶೇಷ ಪೂಜೆ, ಭಕ್ತರಿಗೆ ಅನ್ನ ಸಂತರ್ಪಣೆ
Last Updated 5 ಡಿಸೆಂಬರ್ 2022, 13:34 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯ ವಿವಿಧ ಆಂಜನೇಯ ದೇವಾಲಯಗಳಲ್ಲಿ ಸೋಮವಾರ ಹನುಮದ್‌ ವ್ರತಾಚರಣೆ ಶ್ರದ್ಧಾ ಭಕ್ತಿಯಿಂದ ನೆರವೇರಿತು.

ಆಂಜನೇಯನಿಗೆ ವಿವಿಧ ಅಭಿಷೇಕ, ಅಲಂಕಾರ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮಹಾ ಮಂಗಳಾರತಿ ಬೆಳಗಲಾಯಿತು. ಮಧ್ಯಾಹ್ನ ಭಕ್ತರಿಗೆ ಅನ್ನಸಂತರ್ಪಣೆಯೂ ನಡೆಯಿತು.

ನಗರಕ್ಕೆ ಸಮೀಪದ ಹರಳುಕೋಟೆಯ ಪುರಾಣ ಪ್ರಸಿದ್ಧ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಮುಂಜಾನೆಯಿಂದಲ್ಏ ವಿವಿಧ ಧಾರ್ಮಿಕ ವಿಧಿ ವಿಧಾನ ಆರಂಭವಾದವು. ಆಂಜನೇಯನಿಗೆ ಹಾಲು, ಮೊಸರು, ಜೇನುತುಪ್ಪ, ಎಳನೀರು, ಅರಿಸಿನದ ಅಭಿಷೇಕ ಮಾಡಲಾಯಿತು. ಮಹಾ ಮಂಗಳಾರತಿ ನೆರವೇರಿತು. ದೇವರಿಗೆ ಬೆಳ್ಳಿ ಕವಚ ಧಾರಣೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಚಾಮರಾಜನಗರ, ರಾಮಸಮುದ್ರ ಸೇರಿದಂತೆ ಸುತ್ತಮುತ್ತಲಿನ ಊರುಗಳ ಸಾವಿರಾರು ಭಕ್ತರು ಬೆಳಿಗ್ಗೆಯಿಂದಲೇ ಕುಟುಂಬ ಸಮೇತರಾಗಿ ದೇವಾಲಯಕ್ಕೆ ಭೇಟಿ ನೀಡಿ ಹನುಮಂತನ ದರ್ಶನ ಪಡೆದರು.

ನಗರ, ರಾಮಸಮುದ್ರ ಸೇರಿದಂತೆ ಸುತ್ತಮುತ್ತಲಿನ ಅಪಾರ ಭಕ್ತರು ದೇವಾಲಯಕ್ಕೆ ಬಂದು ಆಂಜನೇಯ ಸ್ವಾಮಿಯ ದರ್ಶನ ಮಾಡಿದರು.ಮಧ್ಯಾಹ್ನ ಭಕ್ತರಿಗೆ ಅನ್ನಸಂತರ್ಪಣೆ ಮಾಡಲಾಯಿತು.

ಹರಳುಕೋಟೆಯ ಜನಾರ್ದನಸ್ವಾಮಿ ದೇವಾಲಯ, ನಗರದ ಹಳೆ ಬಸ್ ನಿಲ್ದಾಣದಲ್ಲಿರುವ ಅಭಯ ಕಾರ್ಯಸಿದ್ಧಿ ಆಂಜನೇಯಸ್ವಾಮಿ ದೇವಸ್ಥಾನ,ನಗರದ ಅಗ್ರಹಾರದ ಬೀದಿಯ ಪಟ್ಟಾಭಿ ರಾಮಮಂದಿರ, ತಾಲ್ಲೂಕಿನ ಹರದನಹಳ್ಳಿಯ ದೇವಸ್ಥಾನ, ನಗರದ ಸಂತೇಮರಹಳ್ಳಿ ವೃತ್ತದಲ್ಲಿರುವ ಆಂಜನೇಯ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT