ಹನೂರು: ‘ಬಾಬಾ ಸಾಹೇಬ್ ಅಂಬೇಡ್ಕರ್, ವಿಶ್ವ ಮೆಚ್ಚುವಂತಹ ಮಹಾನಾಯಕ’ ಎಂದು ನಟ ದುನಿಯಾ ವಿಜಯ್ ತಿಳಿಸಿದರು.

ಹನೂರು ಪಟ್ಟಣದಲ್ಲಿ ಮೂರು ದಿನಗಳ ಕಾಲ ನಡೆಯುವ ಅಂಬೇಡ್ಕರ್ ಹಬ್ಬದ ಮೊದಲ ದಿನ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಅಂಬೇಡ್ಕರ್ ಹಾಕಿಕೊಟ್ಟಂತಹ ಮಾರ್ಗದರ್ಶನದಲ್ಲಿ ನಾವು ನಡೆದಾಗ ಮಾತ್ರ ಇಂತಹ ಕಾರ್ಯಕ್ರಮಗಳಿಗೆ ಅರ್ಥ ಸಿಗುತ್ತದೆ’ ಎಂದರು.

ಬಾಬಾ ಸಾಹೇಬರು ಹೇಳಿದಂತೆ ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೆ ಮತ ಚಲಾವಣೆ ಮಾಡುತ್ತೇನೆ ಎಂಬ ಪ್ರತಿಜ್ಞೆ ಮಾಡಿದಾಗ ಮಾತ್ರ ಇಂತಹ ಕಾರ್ಯಕ್ರಮಗಳಿಗೆ ಮೌಲ್ಯ ಹೆಚ್ಚಾಗುತ್ತದೆ. ಯುವಕರು ವಿದ್ಯಾರ್ಥಿಗಳು ಅಂಬೇಡ್ಕರ್ ಕುರಿತ ಪುಸ್ತಕ ಓದುವ ಮೂಲಕ ಅವರ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಅಂಬೇಡ್ಕರ್, ಇಡೀ ಮಾನವ ಕುಲದ ಸಂಕುಲದ ಒಳಿತಿಗಾಗಿ ತಮ್ಮ ಜೀವನ ತ್ಯಾಗ ಮಾಡಿದರು ಎಂಬುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕಾಗಿದೆ. ಹಾಗಾಗಿ ಯುವಜನರು ಬಾಬಾ ಸಾಹೇಬರ ಆದರ್ಶ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಸಾಹಿತಿ ಹನೂರು ಚನ್ನಪ್ಪ ಮಾತನಾಡಿ, ದುನಿಯಾ ವಿಜಯ್ ಅವರ ಲ್ಯಾಂಡ್ ಲಾರ್ಡ್ ಚಲನ ಚಿತ್ರ ಸಾಕಷ್ಟು ಜನರನ್ನು ಪ್ರೇರೇಪಣೆ ಗೊಳಿಸಿದೆ. ಹಾಗಾಗಿ ಬಾಬಾ ಸಾಹೇಬರು ವಿಶ್ವ ನಾಯಕ ಎಂದು ನಾವೆಲ್ಲರೂ ಕೂಡ ಅರಿತುಕೊಳ್ಳಬೇಕಾಗಿದೆ ಎಂದರು.

ಸಾಹಿತಿ ಹ.ರಾ.ಮಹೇಶ್ ಮಾತನಾಡಿ, ದೇಶದಲ್ಲಿ ಜಾತಿ ವ್ಯವಸ್ಥೆ ಹಾಗೂ ಅಸ್ಪೃಶ್ಯತೆ ಜೀವಂತವಾಗಿದೆ. ಇದು ಬದಲಾವಣೆಯಾದರೆ ಮಾತ್ರ ಪ್ರಬುದ್ಧ ಭಾರತ ನಿರ್ಮಾಣ ಮಾಡಲು ಸಾಧ್ಯ. ಈ ದೇಶದಲ್ಲಿ 6ಸಾವಿರ ಜಾತಿಗಳಿವೆ ಆದರೆ ಜಾತಿ ವ್ಯವಸ್ಥೆಯಲ್ಲಿನ ತಾರತಮ್ಯ ಬದಲಾಗಿಲ್ಲ ಎಂದು ತಿಳಿಸಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಜಾತಿ ವ್ಯವಸ್ಥೆ ಗೆ ಬೇಸತ್ತು ಬೌದ್ಧ ಧರ್ಮದ ಅನುಸರಿಸಿದರು. ಸಮ ಸಮಾಜ ನಿರ್ಮಾಣ ಮಾಡಬೇಕು ಎಂಬುದು ಅವರ ಆಶಯವಾಗಿತ್ತು ಎಂದರು.

ಅಂಬೇಡ್ಕರ್ ರಚನೆಯ ಸಂವಿಧಾನ ಬದಲಾವಣೆ ಮಾಡಬೇಕು ಎನ್ನುವ ಹುನ್ನಾರ ನಡೆಯುತ್ತಿದೆ. ಆದ್ದರಿಂದ ಪ್ರತಿಯೊಬ್ಬರು ಪ್ರಜ್ಞಾವಂತರಾಗಬೇಕು. ಮನುವಾದಿಗಳಿಗೆ ತಕ್ಕ ಪಾಠ ಕಲಿಸಬೇಕು. ಅಂಬೇಡ್ಕರ್ ಆಶಯ ಉಳಿಸಿ ಬೆಳೆಸುವ ಕೆಲಸವಾಗಬೇಕು. ಪ್ರತಿಯೊಬ್ಬರು ಸಂವಿಧಾನ ಅರಿತುಕೊಳ್ಳುವ ಕೆಲಸ ಮಾಡಬೇಕು ಎಂದರು.

ಮೈಸೂರು ಮಾಜಿ ಮೇಯರ್ ಪುರುಷೋತ್ತಮ್, ತುಮಕೂರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್, ಬೆಂಗಳೂರು ಸಿಸಿಬಿ ವಿಭಾಗದ ಎಸಿಪಿ ಮಹಾನಂದ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-37-2110750575

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.