ಹನೂರು: ಭಾರಿ ಮಳೆಯ ಜೊತೆಗೆ ಸಿಡಿಲು ಗುಡುಗಿನ ಆರ್ಭಟಕ್ಕೆ ಸುಮಾರು 20ಕ್ಕೂ ಹೆಚ್ಚು ವಿದ್ಯುತ್ ದೀಪಗಳಿಗೆ ಹಾನಿಯಾಗಿದ್ದು, ಘಟನೆ ನಡೆದು ವಾರ ಕಳೆದರೂ ಇನ್ನೂ ದುರಸ್ತಿಪಡಿಸಿಲ್ಲ ಎಂದು ಬಂಡಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ.

ತಾಲೂಕಿನ ಬಂಡಳ್ಳಿ ಗ್ರಾಮದ ದಲಿತರ ಬಡಾವಣೆಯಲ್ಲಿ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳಲ್ಲಿ ದೀಪಗಳಿಲ್ಲದೆ ತುಂಬಾ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. 15 ದಿನಗಳಿಂದಲೂ ದೀಪ ಅಳವಡಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮ ವಹಿಸುತ್ತಿಲ್ಲ. ಈಗಾಗಲೇ ಮನವಿ ಮಾಡಿದರೂ ಅಧಿಕಾರಿಗಳು ತಿರುಗಿ ನೋಡುತ್ತಿಲ್ಲ. ರಾತ್ರಿ ವೇಳೆ ವಿಷಜಂತುಗಳ ಹಾವಳಿ ಹೆಚ್ಚಾಗಿದೆ. ಇಂಥ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾದರೆ ಯಾರು ಹೊಣೆ. ಹಾಗಾಗಿ ತುರ್ತಾಗಿ ದೀಪಗಳನ್ನು ಅಳವಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯ: ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು 10 ದಿನ ಕಳೆದರೂ ಗಮನವಹಿಸದೆ ಇರುವುದು ಅವರ ಇಚ್ಛಾಶಕ್ತಿಯ ಕೊರತೆ ಜೊತೆಗೆ ನಿರ್ಲಕ್ಷ್ಯ ಎಂದು ಕಾಣುತ್ತಿದೆ. ಈ ವಿಷಯವನ್ನು ಹನೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೂ ತಂದಿದ್ದೇವೆ. ಇನ್ನೆರಡು ಮೂರು ದಿನಗಳಲ್ಲಿ ಸರಿಪಡಿಸದಿದ್ದರೆ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-37-2143035010

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.