ಹನೂರು: ಒಳ ಮೀಸಲಾತಿ ಜಾರಿ ಮಾಡುವಂತೆ ಆಗ್ರಹಿಸಿ ಬೈರನತ್ತ ಗ್ರಾಮದಲ್ಲಿ ಆದಿಜಾಂಬವ (ಮಾದಿಗ) ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಹೋಗಿ ಭಾನುವಾರ ಆಕ್ರೋಶ ವ್ಯಕ್ತಪಡಿಸಿದರು.

ಬೈರನತ್ತ ಗ್ರಾಮದಲ್ಲಿ ಬಾಬು ಜಗಜೀವನ ರಾಂ ಜಯಂತಿ ಆಚರಣೆ ಮಾಡಿದ ನಂತರ ಗ್ರಾಮಸ್ಥರೆಲ್ಲರೂ ಒಂದೆಡೆ ಸೇರಿ ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಂ ಭಾವಚಿತ್ರ ಹಿಡಿದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಸತತವಾಗಿ ಕಳೆದ 35 ವರ್ಷಗಳಿಂದಲೂ ಒಳಮೀಸಲಾತಿಗಾಗಿ ಸಾಕಷ್ಟು ಬಾರಿ ಧ್ವನಿ ಎತ್ತಿದ್ದೇವೆ. ಹಾಗಾಗಿ ನ್ಯಾಯಯುತವಾಗಿ ನಮಗೆ ಸಿಗಬೇಕಾದಂತಹ ಒಳ ಮೀಸಲಾತಿ ಸಿಗಬೇಕು ಎಂದ ಅವರು, ನಾಗಮೋಹನ್ ದಾಸ್ ಅವರ ವರದಿಯನ್ನು ಕೂಡಲೇ ಜಾರಿ ಮಾಡುವಂತೆ ಆಗ್ರಹಿಸಿದರು. ಕಾಂಗ್ರೆಸ್ ಒಳ ಮೀಸಲಾತಿ ವರದಿ ಜಾರಿ ಮಾಡಲು ವಿಳಂಬ ಮಾಡುತ್ತಿರುವುದು ಮಾದಿಗ ಸಮುದಾಯಕ್ಕೆ ಮಾಡುತ್ತಿರುವ ದ್ರೋಹವಾಗಿದೆ ಎಂದು ಆರೋಪಿಸಿದರು.

ಸಾಮಾಜಿಕ ನ್ಯಾಯದ ಬಗ್ಗೆ ಬಹಳ ಕಾಳಜಿ ಇರುವ ಸರ್ಕಾರ ಎಂದು ಪರಿಶಿಷ್ಟ ಜಾತಿಯ ಮಾದಿಗ ಎಡ ಗೈ ಸಮುದಾಯು ನಂಬಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಮೋಸ ಮಾಡುತ್ತಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೈರನತ್ತ ಗ್ರಾಮದ ಯಜಮಾನರು, ಮುಖಂಡರು, ಯುವಕರ ಸಂಘದವರು ಮತ್ತು ಮಹಿಳಾ ಸಂಘದವರು, ಗ್ರಾಮಸ್ಥರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-37-1194802591

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.