ಹನೂರು: ಕರ್ನಾಟಕ ತಮಿಳುನಾಡು ಗಡಿ ಭಾಗದಲ್ಲಿ ಜಿಂಕೆ ಬೇಟೆಯಾಡಿ ಮಾಂಸವನ್ನು ದ್ವಿ ಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ಆರೋಪದ ಮೇಲೆ ಹನೂರು ತಾಲೂಕಿನ ಜಲ್ಲಿಪಾಳ್ಯ ಗ್ರಾಮದ ಕನಕರಾಜು (46) ಎಂಬಾತನನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.

ತಮಿಳುನಾಡು ಕರ್ನಾಟಕ ಅರಣ್ಯ ಗಡಿ ಪ್ರದೇಶದಲ್ಲಿ ಜಿಂಕೆ ಮಾಂಸವನ್ನು ದ್ವಿಚಕ್ರವಾಹದಲ್ಲಿ ತೆಗೆದುಕೊಂಡು ಹೋಗುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಹೂಗ್ಯಂ ವಲಯ ಅರಣ್ಯ ಅಧಿಕಾರಿಗಳ ತಂಡ ದಾಳಿ ನಡೆಸಿತು. ಮಾಂಸ ಸಾಗಾಣಿಗೆ ಬಳಸಿದ್ದ ದ್ವಿ ಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಜಲ್ಲಿ ಪಾಳ್ಯ ಗ್ರಾಮದ ಮಾರಿಕಣ್ಣು ಹಾಗೂ ಪೇರಿಸ್ವಾಮಿ ಸ್ಥಳದಿಂದ ಪರಾರಿಯಾಗಿದ್ದು ಅವರ ಪತ್ತೆಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಶೋಧಕಾರ್ಯ ಆರಂಭಿಸಿದ್ದಾರೆ.

ದಾಳಿಯಲ್ಲಿ ಹೂಗ್ಯಂ ವಲಯ ಅರಣ್ಯ ಅಧಿಕಾರಿಯಾದ ಜಿತೇಂದ್ರ, ಉಪ ವಲಯ ಅರಣ್ಯ ಅಧಿಕಾರಿಗಳಾದ ಗಿರೀಶ್ ,ಶ್ರೀಧರ್, ಅರಣ್ಯ ರಕ್ಷಕರಾದ ಪುಂಡಲೀಕ,ಅನಿಲ್,ಶರವಣ, ಪೆರುಮಾಳ್, ರಾಜು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-37-2023276628

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.