ಹನೂರು: ತಾಲ್ಲೂಕಿನ ಉಡುತೊರೆ ಜಲಾಶಯಕ್ಕೆ ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿ ಜೀವನ್ಮರಣ ಸ್ಥಿತಿಯಲ್ಲಿದ್ದ 22 ವರ್ಷದ ಹೆಣ್ಣಾನೆ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟಿದೆ.

ಶನಿವಾರ ಮೂರು ಕಾಡಾನೆಗಳು ಉಡುತೊರೆ ಜಲಾಶಯದಲ್ಲಿ ನೀರು ಕುಡಿಯಲು ಬಂದಾಗ ಕೆಸರಿನಲ್ಲಿ ಸಿಲುಕಿಕೊಂಡಿದ್ದವು. ಸುದ್ದಿತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು, ಪಶುವೈದ್ಯರು ಹಾಗೂ ಸಿಬ್ಬಂದಿಯನ್ನೊಳಗೊಂಡ ತಂಡ ಕಾರ್ಯಾಚರಣೆ ಆರಂಭಿಸಿತ್ತು. ಎರಡು ಆನೆಗಳನ್ನು ಕೆಸರಿನಿಂದ ಸುರಕ್ಷಿತವಾಗಿ ಮೇಲೆತ್ತಲು ಯಶಸ್ವಿಯಾಗಿತ್ತು. ಆದರೆ, ತೀವ್ರ ನಿತ್ರಾಣಗೊಂಡಿದ್ದ ಹೆಣ್ಣಾನೆ ಮಾತ್ರ ಹೊರಗೆ ಬರಲು ಸಾಧ್ಯವಾಗಿರಲಿಲ್ಲ.

ಅಧಿಕಾರಿಗಳ ನಾಲ್ಕು ದಿನಗಳಿಂದ ಆನೆಯನ್ನು ಮೇಲೆತ್ತಲು ನಿರಂತರ ಶ್ರಮವಹಿಸಿತು. ನಿತ್ರಾಣಗೊಂಡಿದ್ದ ಆನೆಗೆ ಸ್ಥಳದಲ್ಲಿಯೇ ನಿರಂತರವಾಗಿ ಚಿಕಿತ್ಸೆ ನೀಡುವ ಮೂಲಕ ಸುರಕ್ಷಿತವಾಗಿ ಹೊರಗೆ ತರಲು ಶ್ರಮಹಾಕಿತು. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಪಶು ವೈದ್ಯಾಧಿಕಾರಿ ರಮೇಶ್ ಕುಮಾರ್ ನಿರಂತರವಾಗಿ ಚಿಕಿತ್ಸೆ ನೀಡುತ್ತಲೇ ಆರೋಗ್ಯ ಸ್ಥಿತಿಯ ಮೇಲೆ ಗಮನ ಹರಿಸಿದ್ದರು.

ಸೋಮವಾರ ಹಾಗೂ ಮಂಗಳವಾರ ಚಿಕಿತ್ಸೆಗೆ ಸ್ವಲ್ಪ ಸ್ಪಂದಿಸಿದ್ದ ಆನೆ ಹಠಾತ್ ಕುಸಿದುಬಿದ್ದು ಪ್ರಾಣಬಿಟ್ಟಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-40-323659879

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.