ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹನೂರು: ಕಾವೇರಿ ನದಿಯಲ್ಲಿ ಶವ ಪತ್ತೆ– ಗುಂಡು ಹಾರಿಸಿ ಪರಾರಿಯಾಗಿದ್ದವ ಎಂಬ ಶಂಕೆ

Last Updated 17 ಫೆಬ್ರುವರಿ 2023, 9:10 IST
ಅಕ್ಷರ ಗಾತ್ರ

ಹನೂರು: ತಾಲ್ಲೂಕಿನ ಗಡಿ ಭಾಗದ ಕಾವೇರಿ ನದಿಯಲ್ಲಿ ವ್ಯಕ್ತಿಯೊಬ್ಬರ ಶವ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ. ಈತ ಕಳ್ಳ ಬೇಟೆಗಾರ ಆಗಿರಬಹುದು ಎಂದು ಶಂಕಿಸಲಾಗಿದೆ.

ಕಾವೇರಿ ವನ್ಯಧಾಮದ ಗೋಪಿನಾಥಂ ವಲಯದ ಅಡಿಪಾಲರ್ ಪ್ರದೇಶದಲ್ಲಿ ಮಂಗಳವಾರ ರಾತ್ರಿ ತಮಿಳುನಾಡಿನ ನಾಲ್ವರು ಬೇಟೆಗಾರರು ಜಿಂಕೆ ಬೇಟೆಯಾಡುತ್ತಿದ್ದ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲೆ‌ ಗುಂಡು ಹಾರಿಸಿ ಪರಾರಿಯಾಗಿದ್ದರು. ಈ ಸಂದರ್ಭದಲ್ಲಿ ಅರಣ್ಯ‌ ಇಲಾಖೆ ಅಧಿಕಾರಿಗಳು ಕೂಡ ಗಾಳಿಯಲ್ಲಿ ಗುಂಡು ಹಾರಿಸಿದ್ದರು.

ಒಂದು ನಾಡ ಬಂದೂಕು ಹಾಗೂ ತೆಪ್ಪದಲ್ಲೇ ಎಲ್ಲ ಪರಿಕರಳಗನ್ನು ಬಿಟ್ಟು ಬೇಟೆಗಾರರು ಪರಾರಿಯಾಗಿದ್ದರು.

ಕಾವೇರಿ ನದಿಯ ತಮಿಳುನಾಡು ಭಾಗದಲ್ಲಿ ಶವ ಪತ್ತೆಯಾಗಿದೆ. ಮೃತಪಟ್ಟವನ ಹೆಸರನ್ನು ತಮಿಳುನಾಡಿನ ಗೋವಿಂದಪಾಡಿಯ ರಾಜ ಎಂದು ಗುರುತಿಸಲಾಗಿದೆ. ಈತ ಬೇಟೆಗಾರರ ತಂಡದಲ್ಲಿದ್ದ ಎಂದು ಶಂಕಿಸಲಾಗಿದೆ.

'ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದಾನೆಯೇ ಅಥವಾ ನದಿ‌ ದಾಟುವ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆಯೇ ಎಂಬುದು ಸ್ಪಷ್ಟವಾಗಿಲ್ಲ. ಮಾಹಿತಿ‌ ಕಲೆ ಹಾಕಲಾಗುತ್ತಿದೆ' ಎಂದು ಅರಣ್ಯ ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT