ಹನೂರು: ಕನ್ನಡ ಪುಸ್ತಕ ಪ್ರಾಧಿಕಾರ, ಜನಪರ ಸಾಹಿತ್ಯ ಪರಿಷತ್ತು, ಜಿಲ್ಲಾ ಜಾಗೃತಿ ಸಮಿತಿಯಿಂದ ಪಟ್ಟಣದಲ್ಲಿ ಈಚೆಗೆ ಶಾಸಕ ಎಂ.ಆರ್.ಮಂಜುನಾಥ್ ಅವರ ಮನೆಯಲ್ಲಿ ‘ಮನೆಗೊಂದು ಗ್ರಂಥಾಲಯ ಅನುಷ್ಠಾನ’ ಹಾಗೂ ‘ಮನೆ ಮನೆ ಕವಿಗೋಷ್ಠಿ’ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಮಂಜುನಾಥ್, ‘ಮುಂದಿನ ಯುವ ಪೀಳಿಗೆಗೆ ತಲುಪಿಸುವ ಒಳ್ಳೆಯ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಹೈಟೆಕ್ ಗ್ರಂಥಾಲಯ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

ಬೆಂಗಳೂರು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಮಾನಸ ಮಾತನಾಡಿ, ‘ಮನೆಗೊಂದು ಗ್ರಂಥಾಲಯ ನಿರ್ಮಾಣ ಮಾಡುವ ಮೂಲಕ ಮುಂದಿನ ಭವಿಷ್ಯದ ಮಕ್ಕಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪೋಷಕರು ಮುಂದಾಗಬೇಕು. ಮನೆಯಲ್ಲಿ ಪೂಜಾ ಕೊಠಡಿಯ ಜೊತೆಗೆ ಗ್ರಂಥಾಲಯ ನಿರ್ಮಾಣ ಮಾಡುವುದರ ಜೊತೆಗೆ ಮಕ್ಕಳ ಭವಿಷ್ಯಕ್ಕೆ ಅನುಕೂಲವಾಗಲಿದೆ’ ಎಂದರು.

ಕನ್ನಡ ಪುಸ್ತಕ ಪ್ರಾಧಿಕಾರದಿಂದ ಒಂದು ಲಕ್ಷ ಗ್ರಂಥಾಲಯ ನಿರ್ಮಾಣಕ್ಕೆ ಮುಂದಾಗಿದೆ. ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಕಾರ್ಯಕ್ರಮವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ. ಶಾಸಕರ ಮನೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಿರುವುದು ಉತ್ತಮ ವಾಗಿ ಮೂಡಿ ಬಂದಿದೆ. ಯುವ ಕವಿಗಳು ತಮ್ಮ ಕಾವ್ಯ ವಚನ ಗಳ ಮೂಲಕ ತಿಳಿಸಿದ್ದಾರೆ. ಅದು ಪುಸ್ತಕ ಗಳಾಗಿ ಹೊರಹೊಮ್ಮಬೇಕು ಎಂದರು.

ಸಾಹಿತಿ ಡಾ.ಶಿವರಾಜಪ್ಪ ಮಾತನಾಡಿ, ಪುಸ್ತಕ ವ್ಯಕ್ತಿತ್ವ ವಿಕಸನಕ್ಕೆ ಮುನ್ನುಡಿ ಬರೆಯಲಿದೆ. ಪ್ರತಿಯೊಬ್ಬರು ಮನೆಯಲ್ಲಿ ಗ್ರಂಥಾಲಯ ನಿರ್ಮಾಣ ಮಾಡುವ ಮೂಲಕ ಮಕ್ಕಳ ಭವಿಷ್ಯಕ್ಕೆ ಅನುಕೂಲ ಕಲ್ಪಿಸಬೇಕು ಎಂದರು.

ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮಾತನಾಡಿದರು . ಕಸಾಪ ತಾಲ್ಲೂಕು ಅಧ್ಯಕ್ಷ ಮಲ್ಲೇಶ್ ಮಾಲಿಂಗನ ಕಟ್ಟೆ, ಮುಖ್ಸಾಲುಂಡಿ ದೊರೆಸ್ವಾಮಿ, ಪ್ರೇಮ ಸದಾನಂದ ಕಂದವೇಲು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-37-1018136913

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.