ಹನೂರು: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಿಂದ ಮೇ 12ರಂದು ಬೃಹತ್ ಉದ್ಯೋಗ ಮೇಳ ನಡೆಯಲಿದೆ ಎಂದು ಅಧ್ಯಕ್ಷ ಪಾಳ್ಯ ರಾಚಪ್ಪ ತಿಳಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಪಟ್ಟಣದ ಆರ್ ಎಸ್ ದೊಡ್ಡಿ ಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಮೇಳ ಆಯೋಜಿಸಿದ್ದು, ಉದ್ಯೋಗಾಕಾಂಕ್ಷಿ ಯುವಕ, ಯುವತಿಯರು ಉದ್ಯೋಗ ಪಡೆಯಲು ಪ್ರಯತ್ನ ಮಾಡಬೇಕು. ಮೈಸೂರು ಮತ್ತು ಬೆಂಗಳೂರು, ಪಟ್ಟಣದಿಂದ 20 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ ಎಂದರು.

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಚಾಮರಾಜನಗರ, ಹನೂರು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಮತ್ತು ಹನೂರು ತಾಲ್ಲೂಕು ಪಂಚಾಯಿತಿ ಹಾಗೂ ಚಾಮರಾಜನಗರ ವಿಶ್ವವಿದ್ಯಾಲಯ ಇವರ ಸಹಯೋಗದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಸೆಸ್ಕ್ ಎಇಇ ರಂಗಸ್ವಾಮಿ,ನರೇಗಾ ಸಹಾಯಕ ನಿರ್ದೇಶಕ ರವಿಂದ್ರ, ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-37-1376692689

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.