ಹನೂರು: ಮುಖ್ಯ ರಸ್ತೆಯಲ್ಲಿರುವ ಮದ್ಯದ ಅಂಗಡಿಗಳ ಸ್ಥಳಾಂತರಕ್ಕೆ ಒತ್ತಾಯಿಸಿ ತಾಲ್ಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಮರುದ ಎಂಬುವರು ಕುಟುಂಬ ಸಮೇತವಾಗಿ ನಡೆಸುತ್ತಿರುವ ಪ್ರತಿಭಟನೆ 100ನೇ ದಿನಕ್ಕೆ ಕಾಲಿಟ್ಟಿದೆ.

ಮಾರ್ಟಳ್ಳಿ ಗ್ರಾಮದಲ್ಲಿ ಮುಖ್ಯ ರಸ್ತೆಯಲ್ಲಿ ಮೂರು ಮದ್ಯದ ಅಂಗಡಿಗಳಿದ್ದು ಪ್ರತಿನಿತ್ಯ ಮದ್ಯ ಸೇವಿಸಿ ಜನರ ಆರೋಗ್ಯ ಹಾಳಾಗುತ್ತಿದೆ. ಸಾರ್ವಜನಿಕರು ಮುಕ್ತವಾಗಿ ಸಂಚರಿಸಲು ಅಡ್ಡಿಯಾಗಿದ್ದು ಕೂಡಲೇ ಮದ್ಯದಂಗಡಿಗಳನ್ನು ಸ್ಥಳಾಂತರ ಮಾಡುವಂತೆ ಆರೋಪಿಸಿ ಆರಂಭದಲ್ಲಿ ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆ ಸ್ಪಂದಿಸದಿದ್ದಾಗ ಮದ್ಯದ ಅಂಗಡಿಗಳ ಮುಂಭಾಗವೇ ಕುಟುಂಬ ಸಮೇತರಾಗಿ ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗುತ್ತಿದೆ. ಏ.25ಕ್ಕೆ ಧರಣಿ 100 ದಿನ ಪೂರೈಸುತ್ತಿದ್ದು ಇದುವರೆಗೂ ಬೇಡಿಕೆಗಳು ಈಡೇರಿಲ್ಲ ಎಂದು ಪ್ರತಿಭಟನೆಯ ನೇತೃತ್ವ ವಹಿಸಿರುವ ಮರುದ ಆರೋಪಿಸಿದ್ದಾರೆ.

ರಸ್ತೆ ಪಕ್ಕದಲ್ಲಿ ಇರುವ ಮದ್ಯದ ಅಂಗಡಿಗಳಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಜಿಲ್ಲಾಧಿಕಾರಿ, ಅಬಕಾರಿ ಅಧಿಕಾರಿಗಳು, ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಸಹಿತ ಸ್ಥಳೀಯ ಪೊಲೀಸರಿಗೂ ಲಿಖಿತ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ.

ನಾಲ್ ರೋಡ್ನಿಂದ ವಡಕೆ ಹಳ್ಳದವರೆಗೆ ಸುಮಾರು 35ಕ್ಕೂ ಹೆಚ್ಚು ಗೂಡಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದ್ದರೂ ಅಧಿಕಾರಿಗಳು ತಡೆಯುತ್ತಿಲ್ಲ. ಗ್ರಾಮದ ಬಹುತೇಕ ಗೂಡಂಗಡಿಗಳಿಗೆ ಮೂರು ಮದ್ಯದ ಅಂಗಡಿಗಳಿಂದಲೇ ಅಕ್ರಮವಾಗಿ ಮದ್ಯ ಸಬರಾಜಾಗುತ್ತಿದೆ ಎಂದು ಮರುದ ದೂರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-37-1767904120

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.