ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಮಳೆಯಿಂದಾಗಿ ಕೊಚ್ಚಿ ಹೋಗಿದ್ದ ರಸ್ತೆಯನ್ನು ಶನಿವಾರ ಮಣ್ಣು ಹಾಕಿ ತಾತ್ಕಾಲಿಕವಾಗಿ ಸರಿಪಡಿಸಲಾಯಿತು.

ಮೂರು ದಿನಗಳ ಹಿಂದೆ ಬಿದ್ದ ಜೋರು ಮಳೆಗೆ ಸೇಂಟ್ ಮೇರಿಸ್ ಕಾಲೇಜಿಗೆ ತೆರಳುವ ರಸ್ತೆ ಸಂಪೂರ್ಣವಾಗಿ ಕೊಚ್ಚಿ ಹೋಗಿತ್ತು. ಈ ಬಗ್ಗೆ ‘ಪ್ರಜಾವಾಣಿ’ಯಲ್ಲಿ ‘ಕೊಚ್ಚಿ ಹೋದ ರಸ್’ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿ ಗಮನ ಸೆಳೆಯಲಾಗಿತ್ತು. ಇದಕ್ಕೆ ಸ್ಪಂದಿಸಿದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೊಚ್ಚಿ ಹೋಗಿರುವ ರಸ್ತೆಗೆ ಮಣ್ಣು ಹಾಕಿ ತಾತ್ಕಾಲಿಕವಾಗಿ ದುರಸ್ತಿ ಮಾಡಿದ್ದಾರೆ.

ಶಾಶ್ವತ ರಸ್ತೆಗೆ ಆಗ್ರಹ: ಮಳೆ ಬಂದಾಗಲೆಲ್ಲಾ ಮಣ್ಣು ಹಾಕಿ ಸರಿಮಾಡುತ್ತಾರೆ. ಆದರೆ ಮತ್ತೊಮ್ಮೆ ಮಳೆಯಾದರೆ ಹಾಕಿದ್ದ ಮಣ್ಣೆಲ್ಲಾ ಮಳೆ ನೀರಿಗೆ ಕೊಚ್ಚಿ ಹೋಗಿ ರಸ್ತೆ ಮೊದಲಿನಂತೆ ಆಗುತ್ತದೆ. ಆದ್ದರಿಂದ ಈ ಭಾಗಕ್ಕೆ ಡಾಂಬರು ಅಥವಾ ಸಿಸಿ ರಸ್ತೆ ಬೇಕು ಎಂದು ಸ್ಥಳಿಯರು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-37-1328362864

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.