ಹನೂರು: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್ಪಿ)ಕ್ಕೆ ಶನಿವಾರ ನೂತನ ಪದಾಧಿಕಾರಿಗಳ ಸಮಿತಿ ರಚಿಸಲಾಯಿತು.

ಹನೂರು ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಹುಣಸೆಪಾಳ್ಯ ಕೆಂಪರಾಜು, ಪ್ರಧಾನ ಕಾರ್ಯದರ್ಶಿಯಾಗಿ ಪ್ರಭುಸ್ವಾಮಿ, ತಾಲ್ಲೂಕು ಉಸ್ತುವಾರಿ ಯಾಗಿ ಮಲ್ಲು ಕಾಮಗೆರೆ, ತಾಲ್ಲೂಕು ಸಂಯೋಜಕ ನಂಜುಂಡಸ್ವಾಮಿ, ಹನೂರು ಟೌನ್ ಅಧ್ಯಕ್ಷ ಶಿವಲಂಕರಯ್ಯ, ಜಿಲ್ಲಾ ಕಾರ್ಯದರ್ಶಿ ಸುರೇಶ್ ಬಿ ಗುಂಡಾಪುರ, ಉಪಾಧ್ಯಕ್ಷ ಮಹೇಶ್ ಪಾಳ್ಯ ಅವರನ್ನು ಬಿಎಸ್ಪಿ ರಾಜ್ಯಾಧ್ಯಕ್ಷ ಆರ್.ಕೃಷ್ಣಮೂರ್ತಿ ಅವರು ಆಯ್ಕೆ ಮಾಡಿ ಸನ್ಮಾನಿಸಿದರು.

ರಾಜ್ಯಾಧ್ಯಕ್ಷ ಆರ್.ಕೃಷ್ಣಮೂರ್ತಿ ಮಾತನಾಡಿ, ‘ಪಕ್ಷದ ಹನೂರು ವಿಧಾನಸಭಾ ಕ್ಷೇತ್ರದ ಸಮಿತಿಯನ್ನು ರಚನೆ ಮಾಡಿದ್ದೇವೆ, ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಮಾಡುವ ಮೂಲಕ ಮುಂದೆ ಬರುವ ಗ್ರಾಮ, ತಾಲ್ಲೂಕು ಹಾಗೂ ವಿಧಾನಸಭಾ, ಲೋಕಸಭಾ ಚುನಾವಣೆಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ. ಹನೂರು ಕ್ಷೇತ್ರದ 252 ಬೂತ್ಗಳಿಗೂ ಬಿಎಲ್ಒ 2 ಗಳನ್ನು ಆಯ್ಕೆ ಮಾಡುತ್ತೇವೆ’ ಎಂದರು.

‘ದೇಶ ಹಾಗೂ ರಾಜ್ಯದಲ್ಲಿ ಕಳೆದ 79 ವರ್ಷಗಳಿಂದ ದಲಿತರು ಶೇ 90 ರಷ್ಟು ಮತವನ್ನು ಕಾಂಗ್ರೆಸ್ ಪಕ್ಷಕ್ಕೆ ಹಾಕುತ್ತಾ ಬಂದಿದ್ದೇವೆ. ಆದರೆ, ಇಲ್ಲಿಯವರೆಗೆ ದಲಿತ ಮುಖ್ಯಮಂತ್ರಿಯಾಗಲು ಸಾಧ್ಯವಾಗಿಲ್ಲ. ಇನ್ನು ನೂರು ವರ್ಷಗಳು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷದಿಂದ ದಲಿತ ಮುಖ್ಯಮಂತ್ರಿಯನ್ನು ನಿರೀಕ್ಷೆ ಮಾಡಬೇಡಿ. ಒಂದು ವೇಳೆ ರಾಜ್ಯಕ್ಕೆ ದಲಿತ ಮುಖ್ಯಮಂತ್ರಿ ಹಾಗೂ ದೇಶಕ್ಕೆ ದಲಿತ ಪ್ರಧಾನಮಂತ್ರಿ ಆಗಬೇಕಾದರೆ ನಮ್ಮ ಬಿಎಸ್ಪಿಯಿಂದ ಮಾತ್ರ ಸಾಧ್ಯ’ ಎಂದು ಹೇಳಿದರು.

‘ರಾಜಕೀಯವಾಗಿ ದಲಿತರನ್ನು ಅತ್ಯಂತ ಹಿಂದೆ ತರುವ ಪ್ರಕ್ರಿಯೆಯನ್ನು ಕಾಂಗ್ರೆಸ್ ಶುರು ಮಾಡಿದೆ, 21 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿ ಇದೆ, ಯಾವ ರಾಜ್ಯದಲ್ಲೂ ಒಬ್ಬ ದಲಿತ ಮುಖ್ಯಮಂತ್ರಿ ಆಗಲು ಅವಕಾಶ ಕೊಟ್ಟಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು’ ಎಂದರು.

ಬಿಎಸ್ಪಿ ಜಿಲ್ಲಾ ಘಟಕದ ಅಧ್ಯಕ್ಷ ಬಾ.ಮ. ಕೃಷ್ಣಮೂರ್ತಿ, ರಾಜ್ಯ ಕಾರ್ಯದರ್ಶಿ ನಾಗಯ್ಯ, ಕೊಳ್ಳೇಗಾಲ ಮಣಿ, ರಾಜ್ಯ ಕಾರ್ಯಕಾರಣಿ ಸದಸ್ಯ ಬ್ಯಾಡಮುಡ್ಲ ಬಸವಣ್ಣ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-37-1433641948

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.