ಹನೂರು: ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಶಾಸಕ ಮಂಜುನಾಥ್ ತಿಳಿಸಿದರು.

ಪಟ್ಟಣದ ಲೋಕೋಪಯೋಗಿ ಇಲಾಖೆ ಅತಿಥಿಗೃಹದಲ್ಲಿ ನಡೆದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರು ಸಕಾಲದಲ್ಲಿ ಲಭ್ಯವಾಗಬೇಕು, ಅದಕ್ಕೆ ತಕ್ಕಂತೆ ಅಧಿಕಾರಿಗಳು ಪೂರಕ ವ್ಯವಸ್ಥೆಯನ್ನು ಕಲ್ಪಿಸಲು ಸಜ್ಜಾಗಬೇಕು. ಎಲ್ಲಿ ಟ್ಯಾಂಕರ್ ಮೂಲಕ ನೀರು ಒದಗಿಸಲು ಅವಶ್ಯಕತೆ ಇದೆಯೋ ಅಂತ ಕಡೆ ಟ್ಯಾಂಕರ್ ಮೂಲಕ ಒದಗಿಸಿ, ಇಲ್ಲವಾದಲ್ಲಿ ಖಾಸಗಿ ವ್ಯಕ್ತಿಗಳ ಮೂಲಕ ಬೋರ್ವೆಲ್ ನೀರು ಒದಗಿಸಲು ಮುಂದಾಗಬೇಕು. ಆದರೆ ಯಾವುದೇ ಕಾರಣಕ್ಕೂ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇದ್ದುಕೊಂಡು ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರ ಸಮಸ್ಯೆಗೆ ಸರಿಯಾಗಿ ಸ್ಪಂದಿಸಬೇಕು. ಗ್ರಾಮಸ್ಥರಿಂದ ದೂರುಗಳು ಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಬೋರ್ವೆಲ್ ಕೊರೆಸಲು ಮುಂದಾಗಿ: ಮಾರ್ಟಳ್ಳಿ ಹಾಗೂ ಕುರಟ್ಟಿ ಹೊಸೂರು, ಪಿ.ಜಿ ಪಾಳ್ಯ ಸೇರಿದಂತೆ ಇನ್ನಿತರ ಕಡೆ ಎಲ್ಲಿ ಅವಶ್ಯಕತೆ ಇದೆಯೋ ಅಂತಹ ಕಡೆ ನೂತನ ಬೋರ್ವೆಲ್ ಕೊರೆಸಲು ಅಧಿಕಾರಿಗಳು ಮುಂದಾಗಬೇಕು. ಜೊತೆಗೆ ಜಲಜೀವನ್ ಮಿಷನ್ ಯೋಜನೆಯಲ್ಲಿ ಆಗಿರುವಂತಹ ಕಾಮಗಾರಿ ಆದಷ್ಟು ಬೇಗ ಮುಕ್ತಾಯಗೊಳಿಸಿ ಸಾರ್ವಜನಿಕರ ಸೇವೆಗೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಚೈತ್ರಾ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಉಮೇಶ್, ನರೇಗಾ ಸಹಾಯಕ ನಿರ್ದೇಶಕ ರವೀಂದ್ರ, ಹಾಗೂ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗದ ಸುಧನ್ವ ನಾಗ್, ಹನೂರು ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ಪಿಡಿಒಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-37-83552382

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.