ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹನೂರು| ಚುನಾವಣಾ ತರಬೇತಿ ವೇಳೆ ಸಿಬ್ಬಂದಿ ಹೃದಯಾಘಾತದಿಂದ ಸಾವು

Last Updated 18 ಏಪ್ರಿಲ್ 2023, 6:24 IST
ಅಕ್ಷರ ಗಾತ್ರ

ಹನೂರು (ಚಾಮರಾಜನಗರ): ವಿಧಾನಸಭಾ ಚುನಾವಣೆ ನಿಮಿತ್ತ ತರಬೇತಿಯಲ್ಲಿ ಭಾಗವಹಿಸಿದ್ದ ಜಗದೀಶ್ (40) ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಪಟ್ಟಣದ ವಿವೇಕಾನಂದ ಶಾಲೆಯಲ್ಲಿ ಮಂಗಳವಾರ ಎಆರ್ ಒ ಹಾಗೂ ಪಿಆರ್ ಒಗಳಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ತರಬೇತಿ ಆರಂಭವಾಗುತ್ತಿದ್ದಂತೆ ಜಗದೀಶ್ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಹೋಲಿಕ್ರಾಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ದಾರಿ ಮಧ್ಯೆಯೇ‌ ಕೊನೆ ಉಸಿರು ಎಳೆದರು.

ಸ್ಥಳಕ್ಕೆ ಜಿಲ್ಲಾಧಿಕಾರಿ ಡಿ.ಎಸ್ ರಮೇಶ್ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT