ಹನೂರು: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಎಂದು ಶಾಸಕ ಎಂಆರ್ ಮಂಜುನಾಥ್ ಅವರಿಗೆ ತಾಲ್ಲೂಕು ಭೂಮಾಪಕರ ಸಂಘದಿಂದ ಮನವಿ ಸಲ್ಲಿಸಲಾಯಿತು.

ರಾಜ್ಯದಾದ್ಯಂತ ಕಳೆದ 25 ದಿನಗಳಿಂದ ನಡೆಯುತ್ತಿರುವ ಮುಷ್ಕರ ಕುರಿತು ಶಾಸಕರು ವಿಧಾನಸಭೆಯಲ್ಲಿ ಗಮನ ಸೆಳೆದು ಭೂಮಾಪಕರ ವಿವಿಧ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.

ಸರ್ಕಾರ ಭೂಮಾಪಕರ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವ ಮೂಲಕ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಒಂದು ಬಾರಿ ವಿಶೇಷ ನೇಮಕಾತಿ ಮಾಡುವುದು ಕ್ರಮ ಕೈಗೊಳ್ಳಿ ಎಂದು ಕಳೆದ 25 ದಿನಗಳಿಂದ ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಹನೂರು ಹಾಗೂ ಕೊಳ್ಳೇಗಾಲ ತಾಲೂಕಿನ 20ಕ್ಕೂ ಹೆಚ್ಚು ಭೂಮಾಪಕರು ಕೆಲಸ ನಿರ್ವಹಿಸದೆ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

‘ಭೂಮಾಪಕರ ಮುಷ್ಕರದಿಂದ ತಾಲ್ಲೂಕಿನಲ್ಲಿ 300ಕ್ಕೂ ಹೆಚ್ಚು ಕಡತಗಳು ವಿಲೇವಾರಿಯಾಗಿಲ್ಲ. ತತ್ಕಲ್ ಪೋಡಿ, ದರ್ಕಾಸ್ ಕಡತಗಳ ವಿಲೇವಾರಿ, ಅದ್ಬಸ್ತ್ ಕಡತಗಳ ವಿಲೇವಾರಿ ಹಾಗೂ ವಿವಿಧ ಉದ್ದೇಶಕ್ಕಾಗಿ ಭೂಮಾಪನ ಇಲಾಖೆಗೆ ರೈತರ ಹಾಗೂ ಇತರ ಭಾಗದ ಅರ್ಜಿದಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸರ್ಕಾರ ಕೂಡಲೇ ಗಮನ ಹರಿಸಿ ಭೂಮಾಪಕರ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಅಖಿಲ ಕರ್ನಾಟಕ ಸರ್ಕಾರಿ ಪರವಾನಗಿ ಭೂಮಾಪಕರ ತಾಲ್ಲೂಕು ಸಂಘದ ಅಧ್ಯಕ್ಷ ಎಚ್.ಎಂ.ಮಹದೇವಸ್ವಾಮಿ, ಭೂಮಾಪಕರಾದ ಮಾದೇಶ್, ಪ್ರಮೋದ್ ಕುಮಾರ್, ಮಹೇಶ್, ರಾಜೇಂದ್ರ, ಮಹದೇವ ಶೆಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-37-1214058297

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.