ಹನೂರು: ತೋಟಕ್ಕೆ ಬರುವ ವನ್ಯಪ್ರಾಣಿಗಳನ್ನು ಬೇಟೆಯಾಡಲು ಹೊಂಚು ಹಾಕುತ್ತಿದ್ದ ಆರ್.ಎಸ್ ದೊಡ್ಡಿ ಬಡಾವಣೆಯ ಸಿದ್ದಶೆಟ್ಟಿ ಹಾಗೂ ಬಸವರಾಜು ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ಕಾಡು ಹಂದಿಗಳನ್ನು ಬೇಟೆಯಾಡಲು ಬಂದೂಕುಗಳನ್ನು ಇಟ್ಟುಕೊಂಡು ಮಂಗಳವಾರ ರಾತ್ರಿ ಹೊಂಚು ಹಾಕುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿಗಳಿಂದ ನಾಡಕೋವಿ ಸೇರಿದಂತೆ ತಲೆ ಬ್ಯಾಟರಿ(ಟಾರ್ಚ್), ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಾಗಿದೆ. ನ್ಯಾಯಾಲಯ ಇಬ್ಬರಿಗೂನ್ಯಾಯಾಂಗ ಬಂಧನಕ್ಕೆ ನೀಡಿದೆ. ಪಿಎಸ್ಐ ಸಿ.ಮಂಜುನಾಥ್ ಪ್ರಸಾದ್, ಸಿಬ್ಬಂದಿ ಚಂದ್ರು, ರಾಮಕೃಷ್ಣ, ರಾಜು, ರಾಘವೇಂದ್ರ, ಮಣಿಕಂಠ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಜೂಜು: 8 ಮಂದಿ ಬಂಧನ
ಕೊಳ್ಳೇಗಾಲ: ಚೆಲುವನಹಳ್ಳಿ ಗ್ರಾಮದಲ್ಲಿ ಜೂಜಾಡುತ್ತಿದ್ದ 8 ಮಂದಿಯನ್ನು ಗ್ರಾಮಾಂತರ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಗ್ರಾಮದ ಹೊರವಲಯದ ಜೂಜು ಅಡ್ಡೆಗೆ ಪಿಎಸ್ಐ ಗಣೇಶ್ ಕುಮಾರ್ ಹಾಗೂ ಸಿಬ್ಬಂದಿಳಿ ನಡೆಸಿ ಪಣಕ್ಕಿಟ್ಟಿದ್ದ ₹37,540 ನಗದನ್ನು ವಶಪಡಿಸಿಕೊಂಡಿದ್ದಾರೆ.
ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.