ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ತಿರಂಗಾ ಅಭಿಯಾನ, ಜಾಗೃತಿ ಜಾಥಾ

Last Updated 12 ಆಗಸ್ಟ್ 2022, 16:01 IST
ಅಕ್ಷರ ಗಾತ್ರ

ಚಾಮರಾಜನಗರ:ಸ್ವಾತಂತ್ರ ಅಮೃತ ಮಹೋತ್ಸವದ ಅಂಗವಾಗಿ ತಾಲ್ಲೂಕು ಪ್ರಾಥಮಿಕ ಶಾಲಾಶಿಕ್ಷಕರ ಸಂಘದ ವತಿಯಿಂದ ನಗರದ ಕ್ಷೇತ್ರಶಿಕ್ಷಣಾಧಿಕಾರಿ ಕಚೇರಿ ಮುಂಭಾಗ ಮನೆಮನೆ, ಶಾಲೆಗಳಲ್ಲಿ ಧ್ವಜ ಹಾರಿಸುವ ಅಭಿಯಾನಕ್ಕೆ ಕ್ಷೇತ್ರಶಿಕ್ಷಣಾಧಿಕಾರಿ ಡಿ.ಸೋಮಣ್ಣೇಗೌಡ ಶುಕ್ರವಾರ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ‘ನಾವು ಈ ವರ್ಷ 75ನೇ ವರ್ಷದ ಸ್ವಾತಂತ್ರ್ಯ ಆಚರಣೆ ಮಾಡುತ್ತಿದ್ದೇವೆ. ಕೇಂದ್ರ ಸರ್ಕಾರ 13ರಿಂದ ರಿಂದ 15 ರವರಗೆ ಪ್ರತಿಮನೆ, ಸರ್ಕಾರಿ ಕಚೇರಿ, ಶಾಲೆಗಳಲ್ಲಿ ರಾಷ್ಟ್ರಧ್ವಜ ಹಾರಿಸಲು ಆದೇಶ ನೀಡಿದೆ. ಅದರಂತೆ ಶಾಲಾ ಶಿಕ್ಷಕರು ಮೂರುದಿನಗಳ ಕಾಲ ರಾಷ್ಟ್ರಧ್ವಜ ಹಾರಿಸುವ ಮೂಲಕ ದೇಶಭಕ್ತಿ ಪ್ರದರ್ಶಿಸಬೇಕು’ ಎಂದರು.

ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಲಾಲಿಂಗಸ್ವಾಮಿ, ಉಪಾಧ್ಯಕ್ಷ ಸಿ.ಕೆ.ರಾಮಸ್ವಾಮಿ, ಖಜಾಂಚಿ ಕೃಷ್ಣಮೂರ್ತಿ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಮಹದೇವಸ್ವಾಮಿ, ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಬಿಆರ್‌ಸಿ ರಾಜು, ಸುಧಾ, ಸವಿತಾ ರಾಣಿ, ಸುಶೀಲ, ರಾಚಯ್ಯ, ಎಂ.ಡಿ.ಮಹದೇವಯ್ಯ, ಸೋಮಶೇಖರ್, ಕೆಂಪರಾಜು, ಸಂಘದ ಪದಾಧಿಕಾರಿಗಳು ನಿರ್ದೇಶಕರು ಹಾಜರಿದ್ದರು.

ಹಾಸ್ಟೆಲ್‌ ವಿದ್ಯಾರ್ಥಿಗಳಿಂದ ಜಾಥಾ:ಮನೆ ಮನೆಯಲ್ಲಿ ಧ್ವಜ ಹಾರಿಸುವ ಅಭಿಯಾನದ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳು ಹಮ್ಮಿಕೊಂಡಿದ್ದ ಜಾಥಾ ಕಾರ್ಯಕ್ರಮಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಚಾಲನೆ ನೀಡಿದರು.

ಮೂರು ಇಲಾಖೆಗಳ ಹಾಸ್ಟೆಲ್‌ಗಳ ನೂರಾರು ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು. ಧ್ವಜ ಹಿಡಿದಿದ್ದ ಮಕ್ಕಳು ಗುಂಡ್ಲುಪೇಟೆ ವೃತ್ತ , ದೊಡ್ಡಂಗಡಿ ಬೀದಿ, ಚಿಕ್ಕಅಂಗಡಿ ಬೀದಿ, ಸಂತೇಮರಹಳ್ಳಿ ವೃತ್ತ ಡೀವಿಯೇಷನ್‌ ರಸ್ತೆ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆಯ ಮೂಲಕ ಜಿಲ್ಲಾಡಳಿತ ಭವನದವರೆಗೆ ಮೆರವಣಿಗೆ ನಡೆಸಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಮಲ್ಲಿಕಾರ್ಜುನ್, ಸಹಾಯಕ ನಿರ್ದೇಶಕರಾದ ಬಿ.ಚಿಕ್ಕಬಸವಯ್ಯ, ಸಮಾಜ ಕಲ್ಯಾಣ ಇಲಾಖೆಯ ಎಂ.ರಾಜು ವಾರ್ಡನ್‌ಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT