ಬೆಟ್ಟದಪುರ: ಸಮೀಪದ ಹರದೂರು ಗ್ರಾಮದಲ್ಲಿ ಗ್ರಾಮದೇವತೆ ದೊಡ್ಡಮ್ಮ ತಾಯಿ ರಥೋತ್ಸವ ಶುಕ್ರವಾರ ರಾತ್ರಿ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ರಥೋತ್ಸವ ನಿಮಿತ್ತ ಸಕಲ ಸಿದ್ಧತೆ ಮಾಡಿಕೊಳ್ಳಲಾಯಿತು. ಶುಕ್ರವಾರ ಬೆಳಿಗ್ಗೆ ರಥದಲ್ಲಿ ಕಳಸ ಪ್ರತಿಷ್ಠಾಪಿಸಲಾಯಿತು. ಇದಲ್ಲದೆ ಒಂದು ತಿಂಗಳಿಂದ ವಿವಿಧ ಪೂಜೆಗಳನ್ನು ನೆರವೇರಿಸುವ ಮೂಲಕ ಹಬ್ಬಕ್ಕೆ ಬೇಕಾದ ದೇವಿಯ ಅನುಗ್ರಹ ಪಡೆದುಕೊಳ್ಳಲಾಯಿತು. ಶುಕ್ರವಾರ ರಾತ್ರಿ ಸಲ್ಲುವ ಶುಭಲಗ್ನದಲ್ಲಿ ದೇವಿಯ ಉತ್ಸವ ಮೂರ್ತಿಯನ್ನು ದೇಗುಲದಿಂದ ಪಲ್ಲಕ್ಕಿ ಉತ್ಸವ ಮೇಲೆ ತಂದು, ರಥದ ಸುತ್ತ ಪ್ರದಕ್ಷಣೆ ಹಾಕಲಾಯಿತು.

ಬಳಿಕ ರಥದ ಮೇಲೆ ದೇವಿಯ ಉತ್ಸವಮೂರ್ತಿಯನ್ನು ಪ್ರತಿಷ್ಠಾಪಿಸಿ, ಗ್ರಾಮದ ಮುಖ್ಯರಸ್ತೆಯಲ್ಲಿ ರಥವನ್ನು ಎಳೆಯುವ ಮೂಲಕ ಭಕ್ತರು ಭಕ್ತಿಯನ್ನು ಸಮರ್ಪಿಸಿದರು.

ರಥೋತ್ಸವ ಸಂದರ್ಭ ದೇವಿಗೆ ಜೈಕಾರ ಕೂಗಿ ಹರಕೆಯನ್ನು ತೀರಿಸಲಾಯಿತು. ಗ್ರಾಮದ ಯುವಕರು ತಮಟೆ ಹಾಗೂ ಡಿಜೆ ಸದ್ದಿಗೆ ಕುಣಿಯುವ ಮೂಲಕ ಸಂಭ್ರಮಿಸಿದರು. ದೂರದ ಗ್ರಾಮಗಳಿಂದ ಆಗಮಿಸಿದ ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಗ್ರಾಮದ ಪ್ರಮುಖ ಬೀದಿಗಳು, ಮುಖ್ಯರಸ್ತೆ ದೇಗುಲಗಳು ದೀಪಲಂಕಾರಗಳಿಂದ ಕಂಗೊಳಿಸುತ್ತಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-38-1880345738

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.