ಚಾಮರಾಜನಗರ: ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಮುಕ್ತಾಯವಾದ ರಾಜ್ಯಮಟ್ಟದ ನೆಟ್ಬಾಲ್ ಟೂರ್ನಿಯಲ್ಲಿ ಹಾಸನ ತಂಡ 14 ಹಾಗೂ 17 ವರ್ಷದೊಳಗಿನವರ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಚಾಂಪಿಯನ್ ಆಯಿತು.

17 ವರ್ಷದೊಳಗಿನ ಬಾಲಕಿಯರ ಫೈನಲ್ ಪಂದ್ಯದಲ್ಲಿ ಹಾಸನ ತಂಡ 25–21ರಿಂದ ಬೆಂಗಳೂರು ಉತ್ತರ ತಂಡದ ವಿರುದ್ಧ; ಬಾಲಕರ ಫೈನಲ್ನಲ್ಲಿ ಹಾಸನ 38–31ರಿಂದ ಮೈಸೂರು ತಂಡದ ವಿರುದ್ಧ, 14 ವರ್ಷದೊಳಗಿನವರ ಬಾಲಕರ ಫೈನಲ್ನಲ್ಲಿ ಹಾಸನ 17–11ರಿಂದ ಮೈಸೂರು ಎದುರು, ಬಾಲಕಿಯರ ಫೈನಲ್ ಪಂದ್ಯದಲ್ಲಿ ಹಾಸನ 23–12ರಿಂದ ಮೈಸೂರು ತಂಡವನ್ನು ಮಣಿಸಿತು.

ಟೂರ್ನಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ ಹಾಸನ ತಂಡ ಎಲ್ಲ ವಿಭಾಗಗಳಲ್ಲೂ ಪ್ರಶಸ್ತಿ ಮುಡಿಗೇರಿಸಿಕೊಂಡು ಸಂಭ್ರಮಿಸಿತು. ಮೈಸೂರು ತಂಡ ಮೂರು ವಿಭಾಗಗಳಲ್ಲಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು. ವಿಜೇತ ತಂಡಗಳಿಗೆ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು.

ಜ.8ರಂದು ರಾಜಸ್ತಾನದ ಬರ್ಮರ್ನಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟ ನಡೆಯಲಿದ್ದು ವಿಜೇತ ತಂಡಗಳು ಭಾಗವಹಿಸಲು ಅರ್ಹತೆ ಪಡೆದುಕೊಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.