ಚಾಮರಾಜನಗರ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ವತಿಯಿಂದ ನಗರದ ಚಾಮರಾಜೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು.

ಮಹಾಸಭಾ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಕಾರ್ಯಕರ್ತರು ದೇವೇಗೌಡರ ಹೆಸರಿನಲ್ಲಿ ಅರ್ಚನೆ ಮಾಡಿಸಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಸಿಹಿ ಹಂಚಿದರು.

ಮಾಜಿ ಪ್ರಧಾನಿ ದೇವೇಗೌಡರು ದೇಶ ಹಾಗೂ ರಾಜ್ಯಕ್ಕೆ ಕೊಡುಗೆಯನ್ನು ನೀಡಿದ್ದು ಆರೋಗ್ಯ, ಆಯಸ್ಸು ಹೆಚ್ಚಾಗಲಿ. ಮತ್ತೊಮ್ಮೆ ರಾಜ್ಯಸಭಾ ಸದಸ್ಯರಾಗಿ ಜನರ ಸೇವೆ ಮಾಡುವ ಅವಕಾಶ ದೊರೆಯಲಿ ಎಂದು ಪ್ರಾರ್ಥನೆ ಸಲ್ಲಿಸಿರುವುದಾಗಿ ಶ್ರೀನಿವಾಸಗೌಡ ತಿಳಿಸಿದರು.

ಮುಖಂಡರಾದ ಲಕ್ಷ್ಮೀ ನರಸಿಂಹ, ಗಣೇಶ ದೀಕ್ಷಿತ್, ಕರಿಯನಕಟ್ಟೆ ಚಿನ್ನುಮುತ್ತು, ಅರುಣ್ ಕುಮಾರ್ ಗೌಡ, ಸಿ.ಎನ್.ಮಹೇಶ್, ಪಣ್ಯದಹುಂಡಿ ರಾಜು, ಹೊಮ್ಮ ಲೋಕೇಶ್, ಮಹೇಶ್ ಗೌಡ, ತಮಿಳು ಸಂಘದ ಜಗದೀಶ್, ಚಾ.ವೆಂ.ರಾಜಗೋಪಾಲ್, ರವಿಚಂದ್ರ ಪ್ರಸಾದ್ ಕಹಳೆ, ರಾಚಪ್ಪ, ಶಿವಣ್ಣ, ಮುತ್ತುರಾಜು, ರಾಜಣ್ಣ, ಸಿದ್ದಶೆಟ್ಡಿ, ಎಲ್ಐಸಿ ರಾಜು, ಮಹದೇವಯ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-37-1613564637

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.