ಗುರುವಾರ , ಜೂನ್ 24, 2021
23 °C

ಚಾಮರಾಜನಗರದಲ್ಲಿ ಹೆಚ್ಚಿನ ಜನಜಂಗುಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಗುರುವಾರದಿಂದ 4 ದಿನಗಳ ಕಾಲ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್‌ ಘೋಷಣೆಯಾಗಿರುವುದರಿಂದ ಬುಧವಾರ ಬೆಳಿಗ್ಗೆ ಚಾಮರಾಜನಗರದಲ್ಲಿ ನೂರಾರು ಮಂದಿ ಒಮ್ಮೆಗೆ ಖರೀದಿಗೆ ಬಂದಿದ್ದರಿಂದ ಹೆಚ್ಚಿನ ಜನದಟ್ಟಣೆ ಹಾಗೂ ವಾಹನದಟ್ಟಣೆ ಕಂಡು ಬಂತು.

ಇಲ್ಲಿನ ದೊಡ್ಡ ಅಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿ, ಮಾರುಕಟ್ಟೆಯ ಮುಂಭಾಗ,  ಜೋಡಿರಸ್ತೆ ಸೇರಿದಂತೆ ಎಲ್ಲ ಪ್ರಮುಖ ರಸ್ತೆಗಳು ಜನರಿಂದ ತುಂಬಿ ಹೋಗಿತ್ತು. ಖರೀದಿ ಭರಾಟೆ ಎಲ್ಲೆಡೆ  ಹೆಚ್ಚಿತ್ತು.

ಕೊರೊನಾ ಸೋಂಕಿನ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾಗುತ್ತಿರುವುದರಿಂದ ಜಿಲ್ಲಾಡಳಿತ ಗುರುವಾರದಿಂದ ಭಾನುವಾರದವರೆಗೆ ಸಂಪೂರ್ಣ ಲಾಕ್‌ಡೌನ್‌ಗೆ ಆದೇಶಿಸಿದೆ. ಈ ವೇಳೆ ದಿನಸಿ ಖರೀದಿಗೂ ಅವಕಾಶ ನೀಡಿಲ್ಲದೇ ಇರುವುದರಿಂದ ಜನಜಂಗುಳಿ ಬುಧವಾರ ಅಧಿಕವಾಗಿತ್ತು.

ಮಂಗಳವಾರ 6 ಗಂಟೆಯಿಂದ ಬುಧವಾರ ಬೆಳಿಗ್ಗೆ 9 ಗಂಟೆಯವರೆಗೆ ಜಿಲ್ಲೆಯಲ್ಲಿ ಒಟ್ಟು 9 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು