ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ- ರಾತ್ರಿ ಪೂರ್ತಿ ಮಳೆ: ನೆರೆ ಭೀತಿ

Last Updated 15 ಅಕ್ಟೋಬರ್ 2022, 3:36 IST
ಅಕ್ಷರ ಗಾತ್ರ

ಚಾಮರಾಜನಗರ/ಯಳಂದೂರು: ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿಯಿಡೀ ಮಳೆಯಾಗಿದ್ದು, ಜಲಾಶಯಗಳು, ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ.

ಚಾಮರಾಜನಗರ ತಾಲ್ಲೂಕಿನ ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯಗಳಿಂದ 1400 ಕ್ಯುಸೆಕ್ ನೀರು ನದಿಗೆ ಬಿಡಲಾಗುತ್ತಿದ್ದು, ಸುವರ್ಣಾವತಿ ನದಿ ನೀರಿನ ಮಟ್ಟ ಹೆಚ್ಚಾಗಿದೆ. ಚಾಮರಾಜನಗರ ಹಾಗೂ ಯಳಂದೂರು ತಾಲ್ಲೂಕಿನ ನದಿಯ ಅಚ್ಚುಕಟ್ಟು ಪ್ರದೇಶದಲ್ಲಿ ನೆರೆ ಭೀತಿ ಉಂಟಾಗಿದೆ. ಹೊಲಗದ್ದೆಗಳಿಗೆ‌ ನೀರು ನುಗ್ಗಿದ್ದು ರೈತರು ಆತಂಕಗೊಂಡಿದ್ದಾರೆ.

ಚಾಮರಾಜನಗರ ತಾಲ್ಲೂಕಿನ ಹರದನಹಳ್ಳಿಯ‌ ಮರಗದಕೆರೆಯಿಂದ ಭಾರಿ ಪ್ರಮಾಣದಲ್ಲಿ ನೀರು ಸುವರ್ಣಾವತಿ ನದಿ ಸೇರುತ್ತಿದೆ. ತಾಲ್ಲೂಕಿನ ಇತರ ಕೆರೆಗಳ ನೀರು ಕೂಡ ಇದೇ ನದಿ ಸೇರುತ್ತದೆ.

ಯಳಂದೂರು ತಾಲ್ಲೂಕಿನ ಕೆಸ್ತೂರು ಕೆರೆ ತುಂಬಿ ಕೋಡಿ ಬಿದ್ದು ಹರಿಯುತ್ತಿದೆ. ಮುಂಜಾನೆ ಬೆಳಗ್ಗೆ ನೀರು ಮನೆಗಳತ್ತ ನುಗ್ಗಿದೆ. ಶಾಲೆಗೆ ಕೊಚ್ಚಿ ನೀರು ಸೇರುತ್ತಿದೆ.

ಬಿಳಿಗಿರಿರಂಗನ ಬೆಟ್ಟದ ಸುತ್ತಮುತ್ತ ವ್ಯಾಪಕ ಮಳೆಯಾಗುತ್ತಿದೆ.

ಸುರಕ್ಷಿತ ಸ್ಥಳಕ್ಕೆ ತೆರಳಿ:
'ಸುವರ್ಣಾವತಿ ಮತ್ತು ಚಿಕ್ಕಹೊಳೆ ಜಲಾಶಯಗಳಿಂದ ಹೆಚ್ಚಿನ ನೀರನ್ನು ಹರಿಸಲಾಗುತ್ತಿದೆ. ಮಧ್ಯಾಹ್ನದ ವೇಳೆಗೆ ನೀರು ಹೆಚ್ಚಾಗಲಿದೆ. ನದಿ ಪಾತ್ರದ ಸುತ್ತಮುತ್ತ ವಾಸಿಸುವ ಜನರು ಮತ್ತು ಕೃಷಿಕರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು' ಎಂದು ಯಳಂದೂರು ತಹಶೀಲ್ದಾರ್ ಕೆ ಬಿ ಆನಂದಪ್ಪ ನಾಯಕ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT