ಗುಂಡ್ಲುಪೇಟೆ: ತಾಲ್ಲೂಕಿನ ವಿವಿಧೆಡೆ ಬುಧವಾರ ಸಂಜೆ ಗುಡುಗು, ಸಿಡಿಲು ಸಹಿತ ಜೋರು ಮಳೆ ಸುರಿಯಿತು.

ಗುಂಡ್ಲುಪೇಟೆ ಪಟ್ಟಣ, ಬೇಗೂರು, ಹಂಗಳ ಹೋಬಳಿಯಾದ್ಯಂತ ಉತ್ತಮ ಮಳೆಯಾಗಿದೆ. ಕೃಷಿ ಚಟುವಟಿಕೆಗಳು ಗರಿಗೆದರಿವೆ. ಕೆಲವೆಡೆ ಕೃಷಿ ಜಮೀನುಗಳಲ್ಲಿ ನೀರು ಸಂಗ್ರಹಗೊಂಡು ಕೆರೆ ಕಟ್ಟೆಗಳಂತಾಗಿದ್ದವು.

ಮಡಹಳ್ಳಿ ವೃತ್ತ, ಸಾರಿಗೆ ಬಸ್ ನಿಲ್ದಾಣ ಸೇರಿದಂತೆ ವಿವಿಧೆಡೆ ಮಳೆ ನೀರು ನಿಂತಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸರ್ಕಾರಿ, ಖಾಸಗಿ ಸಂಸ್ಥೆಗಳ ನೌಕರರು ಕೆಲಸ ಮುಗಿಸಿ ಮನೆಗೆ ಹೋಗಲು ತೊಂದರೆ ಅನುಭವಿಸಿದರು.

ಬೇಗೂರು ಗ್ರಾಮದಲ್ಲಿ ಚರಂಡಿ ತುಂಬಿ ನೀರು ಹರಿದ ಪರಿಣಾಮ ಮಹೇಂದ್ರ, ನಂಜಮ್ಮ, ರಾಜಶೆಟ್ಟಿ ಅವರ ಮನೆಗಳು ಹಾಗೂ ಸ್ವಾಮಿ ಅವರ ಚಿಕನ್ ಅಂಗಡಿ, ಚಿನ್ನಸ್ವಾಮಿ, ದೇವಮ್ಮ ಅವರ ದಿನಸಿ ಅಂಗಡಿಗಳಿಗೆ ಮಳೆ ನೀರು ನುಗ್ಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.