ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೀವ ರಕ್ಷಕ ಹೆಲ್ಮೆಟ್‌ ಬಳಸಲು ಸಲಹೆ

Last Updated 7 ಆಗಸ್ಟ್ 2019, 14:48 IST
ಅಕ್ಷರ ಗಾತ್ರ

ಚಾಮರಾಜನಗರ: ‘ಜೀವ ರಕ್ಷಣೆಯ ಸಾಧನವಾದ ಹೆಲ್ಮೆಟ್‍ನ ಉಪಯೋಗದ ಬಗ್ಗೆ ಸಾರ್ವಜನಿಕರು ಅರಿತುಕೊಳ್ಳಬೇಕು’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ. ಆನಂದ್‌ ಕುಮಾರ್ಸಲಹೆನೀಡಿದರು.

ನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿ ಮುಂಭಾಗ ಬುಧವಾರ ಹೆಲ್ಮೆಟ್‌ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.

ವಾಹನ ಚಲಾಯಿಸುವಾಗಹೆಲ್ಮೆಟ್ ಧರಿಸಿ, ಜೀವ ಉಳಿಸಿಕೊಳ್ಳಬೇಕು. ಹೆಲ್ಮೆಟ್‌ ರಹಿತ ಚಲಾವಣೆಯಿಂದ ಹೆಲ್ಮೆಟ್‌ ಸಹಿತ ವಾಹನ ಚಲಾಯಿಸಲು ಸಾರ್ವಜನಿಕರು ಮನಸ್ಸು ಮಾಡಬೇಕು ಎಂದು ಮನವಿ ಮಾಡಿದರು.

ಎಲ್ಲರೂಹೆಲ್ಮೆಟ್‌ ಕಡ್ಡಾಯವಾಗಿ ಧರಿಸಬೇಕು. ಇದರಿಂದ ನಿಮ್ಮ ಕುಟುಂಬದ ಸದಸ್ಯರಿಗೆ ನೆಮ್ಮದಿ ಸಿಗಲಿದೆ. ವಾಹನ ಅಪಘಾತವಾದಲ್ಲಿ ಮೊದಲು ತಲೆಗೆ ಪೆಟ್ಟು ಬೀಳುತ್ತದೆ. ಆದ್ದರಿಂದಜೀವ ಉಳಿವಿಗಾಗಿ ಹೆಲ್ಮೆಟ್‌ ಧರಿಸಬೇಕು.ಸಾಕಷ್ಟು ಸಾವು ಹೆಲ್ಮೆಟ್‌ ಧರಿಸದಿರುವುದರಿಂದ ಆಗಿದೆ. ಆದ್ದರಿಂದ ವಾಹನ ಚಾಲಕರು ಕಡ್ಡಾಯವಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಬೈಕ್‌ ಜಾಥಾ: ಸಂಚಾರ ಪೊಲೀಸರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಯಿಂದ ರಾಮಸಮುದ್ರ, ಬಿ.ರಾಚಯ್ಯ ಜೋಡಿರಸ್ತೆ, ಭುವನೇಶ್ವರಿ ವೃತ್ತ, ಕೆಎಸ್ಆರ್‌ಟಿಸಿ ಬಸ್‌ ನಿಲ್ದಾಣ, ಗುಂಡ್ಲುಪೇಟೆ ವೃತ್ತ, ಚಿಕ್ಕಂಗಡಿ, ದೊಡ್ಡ ಅಂಗಡಿ ಬೀದಿ, ಸಂತೆಮರಹಳ್ಳಿ ವೃತ್ತದಿಂದ ಚಾಮರಾಜೇಶ್ವರಸ್ವಾಮಿ ದೇವಸ್ಥಾನದವರೆಗೆ ಬೈಕ್‌ನಲ್ಲಿ ಸಂಚರಿಸಿ ಹೆಲ್ಮೆಟ್‌ ಜಾಗೃತಿ ಜಾಥಾ ನಡೆಸಿದರು.

ಡಿವೈಎಸ್‌ಪಿ ಮೋಹನ್‌, ಸಂಚಾರ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ನಾಗಮ್ಮ, ಪಟ್ಟಣ ಠಾಣೆಯ ಇನ್‌ಸ್ಪೆಕ್ಟರ್‌ ನಾಗೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT