ಚಾಮರಾಜನಗರ: ಯುವಜನೋತ್ಸವದ ಅಂಗವಾಗಿ ಎಚ್.ಐ.ವಿ, ಏಡ್ಸ್ ಕುರಿತು ಜಾಗೃತಿ ಮೂಡಿಸಲು ಗುರುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಮ್ಯಾರಥಾನ್, ರೆಡ್ ರಿಬ್ಬನ್ ಓಟ ಸ್ಪರ್ಧೆಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಚಾಲನೆ ನೀಡಿದರು.

ಕರ್ನಾಟಕ ರಾಜ್ಯ ಏಡ್ಸ್ ತಡೆಗಟ್ಟುವ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಚಾಮರಾಜನಗರ ವಿಶ್ವವಿದ್ಯಾಲಯ, ಆರೋಗ್ಯ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಸಿಮ್ಸ್, ರೋಟರಿ ಸಿಲ್ಕ್ ಸಿಟಿ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಮ್ಯಾರಥಾನ್ಗೆ ಚಾಲನೆ ದೊರೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ‘ಹೆಚ್ಐವಿ ಏಡ್ಸ್ ಬಗ್ಗೆ ಜಾಗರೂಕತೆ ಅಗತ್ಯವಿದೆ. ಸೋಂಕಿತರನ್ನು ಸಮಾಜ ಕೀಳಾಗಿ ನೋಡಬಾರದು, ಅವರು ಮನುಷ್ಯರು ಎಂದು ಭಾವಿಸಿ ಆತ್ಮಸ್ಥೈರ್ಯ ತುಂಬಿ ಸ್ವಾಭಿಮಾನದಿಂದ ಬದುಕಲು ಅವಕಾಶ ಮಾಡಿಕೊಡಬೇಕು. ಸೋಂಕಿತರ ಜೊತೆಗೆ ಮಾತನಾಡಿದರೆ, , ಕೈ ಕುಲುಕಿದರೆ ಎಚ್ಐವಿ ಹರಡುವುದಿಲ್ಲ ಎಂದು ಜಿಲ್ಲಾಧಿಕಾರಿ ಕಿವಿಮಾತು ಹೇಳಿದರು.

ಏಡ್ಸ್ ಬಗ್ಗೆ ಯುವಜನತೆಗೆ ಹೆಚ್ಚು ಅರಿವು ಮೂಡಿಸಬೇಕು, ಸಾಮುದಾಯಿಕ ಪ್ರಜ್ಞೆ ಜಾಗೃತವಾಗಬೇಕು. ಸಮಾಜದಲ್ಲಿ ಎಚ್.ಐ.ವಿ ಏಡ್ಸ್ ನಿಯಂತ್ರಣ ಹಾಗೂ ಜಾಗೃತಿಯ ಬಗ್ಗೆ ರೋಟರಿ ಸಂಸ್ಥೆ, ಸ್ನೇಹಜ್ಯೋತಿ ನೆಟ್ವರ್ಕ್, ಸಮತಾ ಸೊಸೈಟಿ ಸೇರಿದಂತೆ ಹಲವು ಸಂಘಟನೆಗಳು ಶ್ರಮಿಸುತ್ತಿವೆ. ಆರೋಗ್ಯಪೂರ್ಣ ಚಾಮರಾಜನಗರ ನಿರ್ಮಾಣಕ್ಕಾಗಿ ಸಮಾಜದ ಸಹಭಾಗಿತ್ವ ಅಗತ್ಯ ಎಂದರು.

ಜಿಲ್ಲಾ ಪಂಚಾಯತ್ ಸಿಇಒ ಮೋನಾ ರೋತ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್.ಶಶಿಧರ್, ಡಿಎಚ್ಒ ಡಾ.ಎಸ್.ಚಿದಂಬರ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ ಅಧಿಕಾರಿ ಡಾ.ರವಿಕುಮಾರ್, ಸಿಮ್ಸ್ ನಿವಾಸಿ ವೈದ್ಯಾಧಿಕಾರಿ ಡಾ.ಮಹೇಶ್, ಆರೋಗ್ಯ ಶಿಕ್ಷಣ ಅಧಿಕಾರಿ ದೊರೆಸ್ವಾಮಿ ನಾಯಕ್, ರಕ್ತನಿಧಿ ಕೇಂದ್ರದ ಮಹದೇವ ಪ್ರಸಾದ್, ರೋಟರಿ ಸಿಲ್ಕ್ ಸಿಟಿ ಅಧ್ಯಕ್ಷ ಶಮಿತ್ ಕುಮಾರ್, ನಾಗಕೈವಲ್ಯ ಎಂಟರ್ಪ್ರೈಸಸ್, ಮಹೀಂದ್ರ ಹಾಗೂ ಈಶ್ವರಿ ಟ್ರಾಕ್ಟರ್ ಕಂಪೆನಿಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಯಳಂದೂರಿನ ರಂಗದೇಗುಲ ಕಲಾವೇದಿಕೆಯ ಶಾಂತರಾಜು ಮತ್ತು ತಂಡ ಎಚ್.ಐ.ವಿ ಏಡ್ಸ್ ಬಗ್ಗೆ ಜಾಗೃತಿ ಗೀತೆಗಳನ್ನು ಪ್ರಸ್ತುತಪಡಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.